ಕೋಲರ, ಜುಲೈ 05: ಕೋಲ್ಕತ್ತಾದ ಹೌರಾ ಜಂಕ್ಷನ್‌ನಿಂದ ಬೆಂಗಳೂರಿನ ಎಸ್‌ಎಂವಿಟಿಗೆ ಆಗಮಿಸುತ್ತಿದ್ದ ದುರಂತ್ ಎಕ್ಸ್‌ಪ್ರೆಸ್ ರೈಲಿಗೆ ಕಿಡಿಗೇಡಿಯಿಂದ ಬಾಂಬ್ ಬೆದರಿಕೆ ಕರೆ ಬಂದಿದೆ. ಹೀಗಾಗಿ ತಕ್ಷಣ ಅಲರ್ಟ್ ಆದ ರೈಲ್ವೆ ಪೊಲೀಸರು ಕೋಲಾರ ಜಿಲ್ಲೆಯ ಬಂಗಾರಪೇಟೆ ರೈಲ್ವೆ ಜಂಕ್ಷನ್‌ನಲ್ಲಿ ರೈಲು ನಿಲ್ಲಿಸಿ ಪರಿಶೀಲನೆ ಮಾಡಿದರು. ಈ ವೇಳೆ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಸಿಬ್ಬಂದಿ ಪ್ರಯಾಣಿಕರನ್ನು ರೈಲಿನಿಂದ ಕೆಳಗಿಳಿಸಿ ಬಂಗಾರಪೇಟೆ ಪ್ಲಾಟ್ಫಾರ್ಮ್ ನಂ.1ರಲ್ಲಿ ತಪಾಸಣೆ ಮಾಡಿದರು. ಇನ್ನು ದುರಂತ್ ಎಕ್ಸ್‌ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಓರ್ವ ಯುವಕನನ್ನು ಜಿಲ್ಲೆಯ ಬಂಗಾರಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
