Headlines

ದೆಹಲಿ ಪ್ರಯಾಣಕ್ಕೂ ಮುನ್ನ ಸಿದ್ದರಾಮಯ್ಯರನ್ನು ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್: ಸಂಪುಟ ವಿಸ್ತರಣೆ ಬಗ್ಗೆ ಸುದೀರ್ಘ ಚರ್ಚೆ – Kannada News | Karnataka Cabinet Expansion: CM Shivakumar Meets Siddaramaiah before Travel to Delhi

ಬೆಂಗಳೂರು, ಜುಲೈ 15: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ ಸಂಪುಟ ವಿಸ್ತರಣೆ ಕುರಿತು ಪ್ರಾಥಮಿಕ ಸಮಾಲೋಚನೆ ನಡೆಸಲಾಗಿದೆ. ಉಭಯ ನಾಯಕರು 40 ನಿಮಿಷಕ್ಕೂ ಹೆಚ್ಚು ಕಾಲ ಒನ್ ಟು ಒನ್ ಮಾತುಕತೆ ನಡೆಸಿದ್ದು, ಕಾವೇರಿ ನಿವಾಸದಲ್ಲಿ ಸುದೀರ್ಘ ಚರ್ಚೆ ನಡೆದಿದೆ. ಇಂದು ಸಂಜೆ ಒಂದೇ ವಿಮಾನದಲ್ಲಿ ಹಾಲಿ ಮತ್ತು ಮಾಜಿ ಸಿಎಂ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಸಂಬಂಧ ನಾಳೆ ಮೊದಲ ಹಂತದ ಮಾತುಕತೆ ದೆಹಲಿಯಲ್ಲಿ ನಡೆಯುವ ನಿರೀಕ್ಷೆಯಿದೆ. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮತ್ತು ಬಿ.ಕೆ. ಹರಿಪ್ರಸಾದ್ ಭಾಗವಹಿಸಲಿದ್ದಾರೆ. ರಾಹುಲ್ ಗಾಂಧಿ ಅವರ ಅನುಪಸ್ಥಿತಿಯಲ್ಲಿ ಮೊದಲ ಹಂತದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *