ದೇವೇಗೌಡ್ರಿಗೆ ರಾಜ್ಯ ಸರ್ಕಾರ ನೀಡಿದ 1.25 ಕೋಟಿ ರೂ. ಬೆಲೆಯ ಕಾರು ಯಾವುದು? ವಿಶೇಷತೆಗಳೇನು? – Kannada News | Karnataka Governmnet buy Rs 1.25 crore Volvo XC 90 car for Former PM HD Devegowda, here Is car details

ಬೆಂಗಳೂರು, (ಏಪ್ರಿಲ್ 20): 92ರ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಸಕ್ರಿಯರಾಗಿರುವ, ಜೆಡಿಎಸ್ ಪಕ್ಷ ಸಂಘಟನೆಯಲ್ಲೂ ತೊಡಗಿಸಿಕೊಂಡಿರುವ ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ (HD Devegowda) ಅವರಿಗೆ ರಾಜ್ಯ ಸರ್ಕಾರ (Karnataka Governmnet) ದುಬಾರಿ ಕಾರು ಖರೀದಿಸಿದೆ.  ರಾಜ್ಯ ಸರ್ಕಾರ ಕಳೆದ ವರ್ಷ 1.25 ಕೋಟಿ ರೂ. ಮೌಲ್ಯದ ವೋಲ್ವೋ -XC90 ಕಾರು (XC90  Car) ಖರೀದಿಸಿ ಕೊಟ್ಟಿದೆ. ಪೂರಕ ಅಂದಾಜುಗಳ ಮೂರನೇ ಮತ್ತು ಅಂತಿಮ ಕಂತಿನಲ್ಲಿ ಇದರ ಬಗ್ಗೆ ಮಾಹಿತಿ ನೀಡಲಾಗಿದೆ. ರಾಜಕೀಯ ಕಿತ್ತಾಟ, ಆರೋಪ-ಪ್ರತ್ಯಾರೋಪದ ನಡುವೆಯೂ ದೇವೇಗೌಡ್ರಿಗೆ ದುಬಾರಿ ಬೆಲೆ ಐಷರಾಮಿ ಕಾರು ನೀಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರವಿರೋಧದ ಚರ್ಚೆಗಳು ನಡೆದಿವೆ.

ದೇವೇಗೌಡ್ರಿಗೆ ದುಬಾರಿ ಕಾರು ಏಕೆ?

ದೇವೇಗೌಡರು ದೇಶದ ಪ್ರಧಾನಿಯಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಅಲ್ಲದೇ ಅವರು ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಅವರ ಭದ್ರತೆ ಮತ್ತು ಅನುಕೂಲಕ್ಕಾಗಿ ದುಬಾರಿ ಕಾರು ಖರೀದಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಬೆಂಗಳೂರಿನ ‘ಮಾರ್ಷಲ್ ಮೋಟಾರ್ಸ್’ನಿಂದ 1.25 ಕೋಟಿ ರೂಪಾಯಿ ವೆಚ್ಚದಲ್ಲಿ ಈ ವಾಹನವನ್ನು ನೇರವಾಗಿ ಖರೀದಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ (DPAR) ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಅದರಂತೆ ದೇವೇಗೌಡ್ರು ಸಹ ಈಗಾಗಲೇ KAXX G3636 ನಂಬರಿನ ಬಿಳಿ ಬಣ್ಣದ ಕಾರು ಖರೀದಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸಿಎಂ ನಿರೀಕ್ಷೆಯಲ್ಲಿರುವ ಡಿಕೆಶಿ ಖರೀದಿಸಿದ ಐಷಾರಾಮಿ ಕಾರಿನ ವಿಶೇಷತೆ ಏನು?

ಕಾರಿನ ವಿಶೇಷತೆಗಳೇನು?

ದೇವೇಗೌಡರಿಗೆ ಸರ್ಕಾರ ಖರೀದಿಗೆ ಒಪ್ಪಿಗೆ ನೀಡಿರುವ ವೋಲ್ವೋ ಕಾರು ಹಲವು ವಿಶೇಷತೆಗಳನ್ನು ಹೊಂದಿದೆ. 2.0 ಲೀಟರ್ ಟರ್ಬೋ ಎಂಜಿನ್ ಹೊಂದಿರುವ ಈ ಕಾರು ಮೈಲ್ಡ್ ಹೈಬ್ರಿಡ್ ಪವರ್‌ಟ್ರೇನ್ ಹೊಂದಿದೆ. 250 hp ಪವರ್ ಹಾಗೂ 360 Nm ಪೀಕ್ ಟಾರ್ಕ್ ಸಾಮರ್ಥ್ಯ ಹೊಂದಿದೆ.

ಲೆವೆಲ್ 2 ಅಡಾಸ್ (ADAS) ಫೀಚರ್, ಹಿಲ್ ಸ್ಟಾರ್ಟ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಪಾರ್ಕಿಂಗ್ ಅಸೆಸ್ಟೆಂಟ್, ಎಬಿಎಸ್, ಎಬಿಡಿ, 7 ಏರ್ ಬ್ಯಾಗ್, 360 ಡಿಗ್ರಿ ಕ್ಯಾಮೆರಾ, 12.3 ಇಂಚಿನ್ ಇನ್ಸ್‌ಸ್ಟ್ರುಮೆಂಟ್ ಕ್ಲಸ್ಟರ್, 11.2 ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್, ಪನರೋಮಿಕ್ ಸನ್‌ರೂಫ್, ಕ್ಲೈಮೇಟ್ ಕಂಟ್ರಲ್ ಸೇರಿದಂತೆ ಹಲವು ಫೀಚರ್ಸ್ ಈ ಕಾರಿನಲ್ಲಿವೆ. ಇನ್ನು ಕಾರನ್ನು ಮಾಡಿಫಿಕೇಶನ್ ಮಾಡಲು ಸಾಧ್ಯವಿದೆ. ಸದ್ಯ ದೇವೇಗೌಡರಿಗೆ ವಯಸ್ಸಾಗಿರುವುದರಿಂದಕಾರು ಹತ್ತಿ ಇಳಿಯಲು, ಕಾರಿನಲ್ಲಿ ಕುಳಿತುಕೊಳ್ಳಲು ಕೆಲ ಮಾಡಿಫಿಕೇಶನ್ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *