Headlines

ದೇಶವೇ ತಲೆತಗ್ಗಿಸುವ ಕೆಲಸ; ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಆಕ್ರೋಶ – Kannada News | Congress became a national shame BJP slams Rahul Gandhi over Indian Youth Congress shirtless protest at AI Summit

ನವದೆಹಲಿ, ಫೆಬ್ರವರಿ 20: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯ (AI Impact Summit) ಆವರಣದೊಳಗೆ ಪ್ರಧಾನಿ ಮೋದಿ ಹಾಗೂ ಟ್ರಂಪ್ ಫೋಟೋ ಹಾಗೂ ಅವರ ವಿರುದ್ಧ ಘೋಷಣೆ ಇರುವ ಟಿ-ಶರ್ಟ್​ ಹಾಕಿಕೊಂಡು ಬಂದಿದ್ದ ಯುವ ಕಾಂಗ್ರೆಸ್ ಕಾರ್ಯರ್ತರು ಆ ಅಂಗಿಯನ್ನು ಬಿಚ್ಚಿ ‘ಪ್ರಧಾನಿ ಮೋದಿ ರಾಜಿ ಮಾಡಿಕೊಂಡಿದ್ದಾರೆ’ ಎಂದು ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ್ದರು. ಕೈಯಲ್ಲಿ ಅಂಗಿಯನ್ನು ಬೀಸುತ್ತಾ ಅರೆಬೆತ್ತಲೆ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ಎಫ್​ಐಆರ್ ದಾಖಲಿಸಿದ್ದಾರೆ. ಕಾಂಗ್ರೆಸ್​ನ ಈ ವರ್ತನೆಗೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಬಗ್ಗೆ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಕಾಂಗ್ರೆಸ್ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. “ರಾಷ್ಟ್ರೀಯ ಅವಮಾನ” ಎಂದು ಕರೆದ ಅವರು, ಭಾರತ ಸರ್ಕಾರ ಆಯೋಜಿಸಿರುವ ಪ್ರತಿಷ್ಠಿತ ಜಾಗತಿಕ AI ಶೃಂಗಸಭೆಯ ಆವರಣದಲ್ಲಿ, ಕಾಂಗ್ರೆಸ್ ಪಕ್ಷವು ಘನತೆಯಿಂದ ವರ್ತಿಸುವುದನ್ನು ಬಿಟ್ಟು ದೇಶವೇ ತಲೆತಗ್ಗಿಸುವಂತೆ ವರ್ತಿಸಿರುವುದು ಸಹಿಸಲಾಗದ ಸಂಗತಿ. ಇದು ಕಾಂಗ್ರೆಸ್​​ ನಾಯಕರ ಮನಸ್ಥಿತಿಯನ್ನು ತೋರಿಸುತ್ತದೆ” ಎಂದು X ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

“ರಾಹುಲ್ ಗಾಂಧಿಯ ನಾಯಕತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಟಾಪ್‌ಲೆಸ್ ಆಗಿ AI ಶೃಂಗಸಭೆಯ ಸ್ಥಳದಲ್ಲಿ ಕೋಲಾಹಲವನ್ನು ಸೃಷ್ಟಿಸಿ ಜಾಗತಿಕ ವೇದಿಕೆಯಲ್ಲಿ ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಮುಜುಗರ ಉಂಟುಮಾಡಿದ್ದಾರೆ. ಜಾಗತಿಕ ತಂತ್ರಜ್ಞಾನದ ಶಕ್ತಿಶಾಲಿ ರಾಷ್ಟ್ರವಾಗಿ ತನ್ನನ್ನು ತಾನು ಗುರುತಿಸಿಕೊಳ್ಳಲು ಭಾರತ ದೇಶ ಶ್ರಮಿಸುತ್ತಿರುವಾಗ, ಇಂತಹ ನಡವಳಿಕೆಯು ಭಾರತವು ಕುಂಠಿತಗೊಳ್ಳಬೇಕೆಂದು ಬಯಸುವವರ ಹಿತಾಸಕ್ತಿಗಳನ್ನು ಮಾತ್ರ ಪೂರೈಸುತ್ತದೆ. ರಾಜಕೀಯ ವಿರೋಧವು ಪ್ರಜಾಪ್ರಭುತ್ವದ ಹಕ್ಕು. ಆದರೆ ಭಾರತದ ಜಾಗತಿಕ ಇಮೇಜ್ ಅನ್ನು ಹಾಳುಮಾಡುವುದು ಯಾರ ಹಕ್ಕೂ ಅಲ್ಲ. ಭಾರತ ಪ್ರಕಾಶಿಸಲು ಅರ್ಹವಾದ ದೇಶವೇ ವಿನಃ ಈ ರೀತಿ ತಲೆತಗ್ಗಿಸಲು ಅರ್ಹವಾಗಿಲ್ಲ” ಎಂದು ಅಮಿತ್ ಮಾಳವಿಯಾ ಟೀಕಿಸಿದ್ದಾರೆ.

ದೆಹಲಿ ಕ್ಯಾಬಿನೆಟ್ ಸಚಿವ ಸಿರ್ಸಾ ಕೂಡ ಈ ಪ್ರತಿಭಟನೆಯನ್ನು ಖಂಡಿಸುತ್ತಾ, “ಇಂದು ರಾಹುಲ್ ಗಾಂಧಿ AI ಶೃಂಗಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯರ್ತರನ್ನು ಮುಂದೆ ಬಿಟ್ಟು ಪ್ರತಿಭಟನೆ ನಡೆಸಿದರು. ಅವರು ತಮ್ಮ ಬಟ್ಟೆಗಳನ್ನು ತೆಗೆದು ವಿದೇಶಿ ಅತಿಥಿಗಳ ಮುಂದೆ ಬೆತ್ತಲೆಯಾಗಿ ನೃತ್ಯ ಮಾಡಿದರು. ಇದು ತುಂಬಾ ನಾಚಿಕೆಗೇಡಿನ ಸಂಗತಿ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿಯ ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಕೂಡ ಪ್ರತಿಕ್ರಿಯಿಸಿದ್ದು, “ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದುರಹಂಕಾರದ ವರ್ತನೆ ತೋರಿದ್ದಾರೆ. ಅವರು ಬಿಜೆಪಿ ಸರ್ಕಾರವನ್ನು ಗುರಿಯಾಗಿಸಲು ಭಾರತ ದೇಶವನ್ನು ಅವಮಾನಿಸಿದ್ದಾರೆ” ಎಂದು ಹೇಳಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ, “ಕಾಂಗ್ರೆಸ್ ದೇಶ ವಿರೋಧಿ ಕೃತ್ಯ ಎಸಗಿದೆ” ಎಂದು ಟೀಕಿಸಿದ್ದಾರೆ.

ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್, “ಭಾರತವು ಜಾಗತಿಕ ತಂತ್ರಜ್ಞಾನ ಶಕ್ತಿ ಕೇಂದ್ರವಾಗಿ ತನ್ನನ್ನು ತಾನು ಸ್ಥಾನಿಕವಾಗಿಸಿಕೊಳ್ಳುವತ್ತ ಹೆಜ್ಜೆ ಹಾಕುತ್ತಿರುವ ಸಮಯದಲ್ಲಿ ಕಾಂಗ್ರೆಸ್ ದೇಶವನ್ನು ಮುಜುಗರಕ್ಕೀಡುಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಇದು ರಾಜಕೀಯ ವಿರೋಧವಲ್ಲ, ಇದು ಭಾರತದ ಜಾಗತಿಕ ಇಮೇಜ್ ಅನ್ನು ಹಾಳುಮಾಡುವ . ಹೇಯ ಪ್ರಯತ್ನ” ಎಂದು ಹೇಳಿದ್ದಾರೆ.

ಯೂತ್ ಕಾಂಗ್ರೆಸ್ ಕಾರ್ಯರ್ತರು ಎಂದು ಹೇಳಿಕೊಂಡಿರುವ ಜನರ ಗುಂಪು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಭಾರತ್ ಮಂಟಪದೊಳಗೆ ಪ್ರವೇಶಿಸಿದ್ದರು. ಅವರು ಸ್ವೆಟರ್ ಮತ್ತು ಜಾಕೆಟ್ ಹಾಕಿಕೊಂಡಿದ್ದರಿಂದ ಸೆಕ್ಯುರಿಟಿಗಳಿಗೆ ಅವರ ಶರ್ಟ್​​ ಮೇಲಿದ್ದ ಮೋದಿ ಹಾಗೂ ಟ್ರಂಪ್ ಫೋಟೋ, ಘೋಷಣೆ ಕಾಣಿಸಿರಲಿಲ್ಲ. ಒಳಗೆ ಬಂದ ನಂತರ ಅವರು ತಮ್ಮ ಜಾಕೆಟ್ ಬಿಚ್ಚಿ ಅಂಗಿಯನ್ನು ಕೈಯಲ್ಲಿ ಹಿಡಿದು ಘೋಷಣೆ ಕೂಗತೊಡಗಿದರು. ಈ ವಿಷಯ ಗೊತ್ತಾಗುತ್ತಿದ್ದಂತೆ ಕೆಲವೇ ನಿಮಿಷಗಳಲ್ಲಿ ಅವರನ್ನು ನಮ್ಮ ವಶಕ್ಕೆ ಪಡೆಯಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *