ಮೈಸೂರು, ಏಪ್ರಿಲ್ 28: ತಮ್ಮ ಬಗ್ಗೆ ಮಾತನಾಡಿದ್ದ ನಟ ಚೇತನ್ ಅಹಿಂಸ ಬಗ್ಗೆ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಧಮ್ ಇದ್ದರೆ ಬಂದು ಅವರಿಗೆ ಚುನಾವಣೆಗೆ ನಿಲ್ಲಲು ಹೇಳಿ. ಅವರಂತೆ ಮನೆಯಲ್ಲಿ ಕುಳಿತು ಟ್ವಿಟ್ಟರ್ನಲ್ಲಿ ನಾನೂ ಸಾವಿರ ಬರೆಯುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರನಟ ಡಾ. ರಾಜ್ಕುಮಾರ್ ಅವರ ಬಗ್ಗೆ ಚೇತನ್ ಮಾತನಾಡಿದ್ದನ್ನು ನಿಖಿಲ್ ಇತ್ತೀಚೆಗೆ ಖಂಡಿಸಿದ್ದರು. ಅಣ್ಣಾವ್ರ ಹೆಸರು ಹೇಳಲು, ಅವರ ಬಗ್ಗೆ ಮಾತನಾಡಲು ನಟ ಚೇತನ್ ಅವರಿಗೆ ಯೋಗ್ಯತೆ ಇಲ್ಲ. ಅವರೊಬ್ಬ ಪ್ರಚಾರಪ್ರಿಯ ಎಂದು ದೂರಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದ ಚೇತನ್ ಅಹಿಂಸ, ನಿಖಿಲ್ ಕುಮಾರಸ್ವಾಮಿ ಮತ್ತು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರನ್ನು ಟೀಕೆ ಮಾಡಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
