ಬೆಂಗಳೂರು, (ಜುಲೈ 25): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶದೆಲ್ಲೆಡೆ ಪ್ರತಿಭಟನೆ ಕಾವು ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ದೆಹಲಿ ಜಂತರ್ ಮಂತರ್ನಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದು, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕೆಂದು ಪಟ್ಟು ಹಿಡಿದಿತ್ತು. ಹೀಗಾಗಿ ಅಂತಿಮವಾಗಿ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
