ಧಾರವಾಡ, ಜುಲೈ 28: ವಿದ್ಯುತ್ ಪೂರೈಕೆಯಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದ ಧಾರವಾಡ ಜಿಲ್ಲೆಯ ಅಳ್ನಾವರ ರೈಲು ನಿಲ್ದಾಣದಲ್ಲಿ ನಾಲ್ಕು ಗಂಟೆಗೂ ಅಧಿಕ ಕಾಲ ಹಲವು ರೈಲುಗಳು ನಿಂತ ಪರಿಣಾಮ ಪ್ರಯಾಣಿಕರು ಪರದಾಡುವಂತಾಯಿತು. ಲೋಂಡಾ ಭಾಗದಲ್ಲಿ ಉಂಟಾದ ವಿದ್ಯುತ್ ಪೂರೈಕೆ ಸಮಸ್ಯೆಯಿಂದ ಬೆಂಗಳೂರು–ಬೆಳಗಾವಿ ಎಕ್ಸ್‌ಪ್ರೆಸ್ ಹಾಗೂ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್ ಸೇರಿದಂತೆ ಕೆಲವು ರೈಲುಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪರಿಣಾಮವಾಗಿ ರೈಲುಗಳನ್ನು ಅಳ್ನಾವರ ರೈಲು ನಿಲ್ದಾಣದಲ್ಲೇ ನಿಲ್ಲಿಸಲಾಯಿತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
