ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್; ಯೋಗೇಶ್ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ನಿಂದ ಜಾಮೀನು
Image Credit source: Supreme Court Website
ಧಾರವಾಡ, ಫೆಬ್ರವರಿ 27: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಸುಪ್ರೀಂಕೋರ್ಟ್ ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದು, ಸಧ್ಯ ಕುಲಕರ್ಣಿಗೆ ರಿಲೀಫ್ ಸಿಕ್ಕಿದೆ. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ. ಶಾಸಕ ವಿನಯ್ ಕುಲಕರ್ಣಿ ಜಾಮೀನು ಪಡೆಯುವ ಮೂಲಕ ನ್ಯಾಯ ಪ್ರಕ್ರಿಯೆಯಲ್ಲಿ ಮುಂದಿನ ಹಂತಕ್ಕೆ ಸಾಗಿದ್ದಾರೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 12:08 pm, Fri, 27 February 26