Headlines

‘ಧುರಂಧರ್’ ನಿರ್ದೇಶಕನ ಮೇಲೆ ಕತೆ ಕದ್ದ ಆರೋಪ: ಕರ್ನಾಟಕ ಹೈಕೋರ್ಟ್ ಹೇಳಿದ್ದೇನು? – Kannada News | Karnataka High Court refuse to cancel Dhurandhar 2 movie CBFC certificate

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳ ಒಟ್ಟು ಕಲೆಕ್ಷನ್ 3000 ಕೋಟಿಗಳನ್ನು ದಾಟಿದೆ. ಸಿನಿಮಾ ಅನ್ನು ಜನ ಮುಗಿಬಿದ್ದು ನೋಡುತ್ತಿದ್ದಾರೆ. ಸಿನಿಮಾ ನಿರ್ದೇಶಿಸಿರುವ ಆದಿತ್ಯ ಧರ್ ಈಗ ಭಾರತದ ಸ್ಟಾರ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಆದರೆ ಆದಿತ್ಯ ಧರ್ ಮೇಲೆ ನಿರ್ದೇಶಕರೊಬ್ಬರು ಕತೆ ಕದ್ದ ಆರೋಪವನ್ನು ಮಾಡಿದ್ದರು, ಅಲ್ಲದೆ, ಕರ್ನಾಟಕ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿ, ಸಿನಿಮಾಗಳ ಸಿಬಿಎಫ್​​ಸಿ ಪ್ರಮಾಣ ಪತ್ರವನ್ನು ರದ್ದು ಮಾಡುವಂತೆ ಕೋರಿದ್ದರು.

ಕರ್ನಾಟಕದವರಾದ ಸಂತೋಶ್ ಕುಮಾರ್ ಎಂಬುವರು, ‘ಧುರಂಧರ್ 2’ ಸಿನಿಮಾ ಬಿಡುಗಡೆ ಆದ ಬಳಿಕ ನಿರ್ದೇಶಕ ಆದಿತ್ಯ ಧರ್ ವಿರುದ್ಧ ಕತೆ ಕದ್ದ ಆರೋಪ ಮಾಡಿದ್ದರು. ತಾವು ಈಗಾಗಲೇ ‘ಡಿ ಸಾಹೇಬ್’ ಹೆಸರಿನ ಕತೆಯನ್ನು ರಿಜಿಸ್ಟರ್ ಮಾಡಿಸಿದ್ದು, ‘ಧುರಂಧರ್ 2’ ಸಿನಿಮಾ ಕತೆ ಅದೇ ಕತೆಯನ್ನು ಕದ್ದು ಮಾಡಲಾಗಿದೆ ಎಂದು ಆರೋಪಿಸಿದ್ದರು. ತಾವು ಕತೆಯನ್ನು ಸ್ಕ್ರೀನ್ ರೈಟರ್ಸ್ ಅಸೋಸಿಯೇಷನ್​​ನಲ್ಲಿ ರಿಜಿಸ್ಟರ್ ಮಾಡಿಸಿರುವುದಾಗಿಯೂ ಅವರು ಹೇಳಿದ್ದರು.

ಕರ್ನಾಟಕ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿದ್ದ ಸಂತೋಶ್ ಕುಮಾರ್, ಆದಿತ್ಯ ಧರ್ ಅವರು ತಮ್ಮ ಕತೆಯನ್ನು ಕದ್ದು ಸಿನಿಮಾ ಮಾಡಿದ್ದು, ಸಿನಿಮಾದ ಸಿಬಿಎಫ್​​ಸಿ ಪ್ರಮಾಣ ಪತ್ರವನ್ನು ರದ್ದು ಮಾಡಬೇಕು ಎಂದು ಕೋರಿದ್ದರು. ಆದರೆ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸಿನಿಮಾದ ಪ್ರಮಾಣ ಪತ್ರವನ್ನು ರದ್ದು ಮಾಡಲು ನಿರಾಕರಿಸಿದರು.

ಇದನ್ನೂ ಓದಿ:‘ಧುರಂಧರ್ 2’ ಬಳಿಕ ರಣವೀರ್ ಸಿಂಗ್ ಮುಂದಿನ ಸಿನಿಮಾ ಇದೇ ನೋಡಿ

ಸಂತೋಶ್ ಕುಮಾರ್ ಅವರು ಆದಿತ್ಯ ಧರ್ ವಿರುದ್ಧ ಕೃತಿಚೌರ್ಯದ ಆರೋಪ ಮಾಡಿದ ಬಳಿಕ, ಆದಿತ್ಯ ಧರ್ ಅವರು ಸಂತೋಶ್​​ ವಿರುದ್ಧ ಬಾಂಬೆ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಇತ್ತೀಚೆಗಷ್ಟೆ ಬಾಂಬೆ ಹೈಕೋರ್ಟ್​​ನಲ್ಲಿ ನಡೆದಿದ್ದು, ಸಂತೋಶ್ ಕುಮಾರ್, ಆದಿತ್ಯ ಧರ್ ವಿರುದ್ಧ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ಸೂಚಿಸಿದೆ.

‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳನ್ನು ಆದಿತ್ಯ ಧರ್ ನಿರ್ದೇಶಿಸಿದ್ದು, ಭಾರತೀಯ ಸೈನಿಕನೊಬ್ಬ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರನ್ನು ಮಟ್ಟ ಹಾಕುವ ಕತೆಯನ್ನು ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ರಣ್ವೀರ್ ಸಿಂಗ್ ನಾಯಕ, ಸಂಜಯ್ ದತ್, ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್, ಆರ್ ಮಾಧವನ್ ಇನ್ನೂ ಹಲವರು ಸಿನಿಮಾನಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *