ನಟ ರಣವೀರ್ ಸಿಂಗ್ ಅವರು ಕಳೆದ ವರ್ಷ ‘ಧುರಂಧರ್’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡರು. ಈಗ ‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಬಿಡುಗಡೆಯ ತಯಾರಿಯಲ್ಲಿ ಇರುವಾಗಲೇ ಒಂದು ಆತಂಕ ಎದುರಾಗಿದೆ. ರಣವೀರ್ ಸಿಂಗ್ (Ranveer Singh) ಅವರಿಗೆ ಬೆದರಿಕೆ ಹಾಕಲಾಗುತ್ತಿದೆ. ಆ ಮೂಲಕ ಹಣ ದೋಚಲು (Extortion) ಖದೀಮರು ಸಂಚು ರೂಪಿಸಿದ್ದಾರೆ. ಈ ಬಾರಿ ಬರೋಬ್ಬರಿ 10 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಡಲಾಗಿದೆ. ಈ ಬಗ್ಗೆ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವರದಿಗಳ ಪ್ರಕಾರ, ರಣವೀರ್ ಸಿಂಗ್ ಅವರ ಮ್ಯಾನೇಜರ್ ವಾಟ್ಸಪ್ಗೆ ಬೆದರಿಕೆ ಸಂದೇಶ ಬಂದಿದೆ. ಅಮೆರಿಕ ಮೂಲದ ಮೊಬೈಲ್ ಸಂಖ್ಯೆಯಿಂದ ಸಂದೇಶ ಕಳಿಸಿ ಬೆದರಿಕೆ ಹಾಕಲಾಗಿದೆ. ಮುಂಬೈ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ತೀವ್ರಗೊಳಿಸಿದ್ದಾರೆ. ಇಂಥ ಪ್ರಕರಣಗಳು ಆಗಾಗ ನಡೆಯುತ್ತಿರುವುದರಿಂದ ಸೆಲೆಬ್ರಿಟಿಗಳಲ್ಲಿ ಆತಂಕ ಹೆಚ್ಚಾಗಿದೆ.
ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಕಡೆಯಿಂದ ಈ ಮೊದಲು ಅನೇಕ ಸೆಲೆಬ್ರಿಟಿಗಳಿಗೆ ಬೆದರಿಕೆ ಕರೆ ಬಂದಿತ್ತು. ಈ ಬಾರಿ ಕೂಡ ಅದೇ ಗ್ಯಾಂಗ್ನ ಸದಸ್ಯರಿಂದಲೇ ರಣವೀರ್ ಸಿಂಗ್ ಅವರಿಗೆ ಬೆದರಿಕೆ ಸಂದೇಶ ಕಳಿಸಲಾಗಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸಂದೇಶ ಕಳಿಸಿದ ಮೊಬೈಲ್ ಸಂಖ್ಯೆಯ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ರಣವೀರ್ ಸಿಂಗ್ ಅವರ ಮನೆ ಎದುರು ಭದ್ರತೆ ಹೆಚ್ಚಿಸುವ ಸಾಧ್ಯತೆ ಇದೆ. ಕೆಲವೇ ದಿನಗಳ ಹಿಂದೆ ಕೂಡ ರಣವೀರ್ ಸಿಂಗ್ ಅವರಿಗೆ ಬೆದರಿಕೆ ಸಂದೇಶ ಬಂದಿತ್ತು. ಆ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿತ್ತು. ಅದಾಗಿ 12 ದಿನ ಕಳೆಯುವುದರೊಳಗೆ ಮತ್ತೆ ಬೆದರಿಕೆ ಸಂದೇಶ ಕಳಿಸಲಾಗಿದೆ. 10 ಕೋಟಿ ರೂಪಾಯಿಗೆ ಬೇಡಿಕೆ ಇಡಲಾಗಿದೆ.
ಇದನ್ನೂ ಓದಿ: ರಣವೀರ್ಗೆ ನೀಡಿದ ಭದ್ರತೆಯಿಂದ ನೆರೆಯವರಿಗೆ ತೊಂದರೆ; ಬದಲಾಗುತ್ತಾ ದಂಪತಿ ಮನೆ?
ಹಲವು ವರ್ಷಗಳಿಂದ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಂಪತಿ ಬಾಲಿವುಡ್ನಲ್ಲಿ ಸ್ಟಾರ್ ಕಲಾವಿದರಾಗಿ ಮಿಂಚುತ್ತಿದ್ದಾರೆ. ಅವರ ಬಳಿ ಸಾವಿರಾರು ಕೋಟಿ ರೂಪಾಯಿ ಹಣ ಇದೆ. ‘ಧುರಂದರ್’ ಗೆದ್ದ ಬಳಿಕ ರಣವೀರ್ ಸಿಂಗ್ ಅವರ ಡಿಮ್ಯಾಂಡ್ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅವರಿಂದ 10 ಕೋಟಿ ರೂಪಾಯಿ ಸುಲಿಗೆ ಮಾಡಲು ಕಿಡಿಗೇಡಿಗಳು ಸಂಚು ರೂಪಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
