ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರ ಇತ್ತೀಚೆಗೆ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಪುನೀತ್ ರಾಜ್ಕುಮಾರ್ (Puneeth Rajkumar), ನಿರ್ದೇಶಕರಾದ ಎ.ಪಿ. ಅರ್ಜುನ್, ಜೋಗಿ ಪ್ರೇಮ್, ನಟ ಧ್ರುವ ಸರ್ಜಾ (Dhruva Sarja) ಬಗ್ಗೆ ಅವರು ಅಸಭ್ಯವಾಗಿ ಮಾತನಾಡಿದ್ದರು. ಅದಕ್ಕೆ ಈಗ ಅವರು ಸ್ಪಷ್ಟನೆ ನೀಡಿದ್ದಾರೆ. ಮಾತಿನ ಭರದಲ್ಲಿ ನೀಡಿದ ಹೇಳಿಕೆಗೆ ಅವರು ಕ್ಷಮೆ ಕೇಳಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಎದುರಲ್ಲಿ ಶ್ರೀನಿವಾಸ್ ಅವರು ಕ್ಷಮೆ ಕೇಳಿದ್ದಾರೆ. ‘ಕಾಟನ್ಪೇಟೆ ಗೇಟ್ ಸಿನಿಮಾ ಬಿಡುಗಡೆಗೆ ನನಗೆ ಹಣದ ಅವಶ್ಯಕತೆ ಇತ್ತು. 2 ವರ್ಷದಿಂದ ಸಿನಿಮಾ ಬಿಡುಗಡೆ ಆಗಿಲ್ಲ. ಆ ದುಃಖದಿಂದ ನಾನು ಹಾಗೆ ಮಾತನಾಡಿದೆ. ನನ್ನ ಮಾತನ್ನು ನಾನು ವಾಪಸ್ ತೆಗೆದುಕೊಳ್ಳುತ್ತೇನೆ. ದಯವಿಟ್ಟು ಕ್ಷಮಿಸಿ’ ಎಂದು ಕನಕಪುರ ಶ್ರೀನಿವಾಸ್ (Kanakapura Srinivas) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
