ಚಿಕ್ಕಬಳ್ಳಾಪುರ, ಜನವರಿ 12: ನಂದಿಗಿರಿಧಾಮದ ಬಳಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ನಂದಿ ಹಿಲ್ಸ್ಗೆ ಬರುವ ಪ್ರವಾಸಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ. ಗಿರಿಧಾಮದ ಕಣಿವೆ ಬಸವಣ್ಣ ದೇವಸ್ಥಾನದ ಬಳಿ ಭಾನುವಾರ ರಾತ್ರಿ ಚಿರತೆ ಕಾಣಿಸಿದೆ. ಇತ್ತೀಚಿಗೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಚಿರತೆ ಸಂತತಿ ಹೆಚ್ಚಳವಾಗಿದ್ದು, ಪ್ರತಿದಿನ ಒಂದಿಲ್ಲೊಂದು ಕಡೆ ಕಾಣಿಸುತ್ತಿವೆ.
