ನಟ ಅಜಿತ್ ತಾಯಿ ಮೋಹಿನಿ ಮಣಿ ನಿಧನ: ಕೊನೆಯ ಮಾತನ್ನು ಕೇಳಲು ಆಗಲೇ ಇಲ್ಲ

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಅವರ (Ajith Kumar) ತಾಯಿ ಮೋಹಿನಿ ಮಣಿ (85) ಅವರು ಶನಿವಾರ ಬೆಳಿಗ್ಗೆ ಚೆನ್ನೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೂರು ವರ್ಷಗಳ ಹಿಂದೆ (ಮಾರ್ಚ್ 24, 2023) ಅಜಿತ್ ಅವರ ತಂದೆ ಪಿ. ಸುಬ್ರಮಣ್ಯಂ ಅವರು ತಮ್ಮ 85ನೇ ವಯಸ್ಸಿನಲ್ಲಿಯೇ ನಿಧನರಾಗಿದ್ದರು.

ಕಾರ್​ ರೇಸ್ ಹಿನ್ನೆಲೆಯಲ್ಲಿ ದುಬೈನಲ್ಲಿದ್ದ ನಟ ಅಜಿತ್ ಕುಮಾರ್ ಅವರು ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚೆನ್ನೈಗೆ ಹಿಂತಿರುಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಚೆನ್ನೈನ ಪಾಲವಾಕ್ಕಂನಲ್ಲಿರುವ ಅಜಿತ್ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ತಾಯಿಯ ಜೊತೆ ಕೊನೆಯದಾಗಿ ಮಾತನಾಡಲು ಅಜಿತ್​ಗೆ ಸಾಧ್ಯವಾಗಲೇ ಇಲ್ಲ.

ಅಜಿತ್ ತಾಯಿಯ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ರಾಜಕಾರಣಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ‘ನಟ ಅಜಿತ್ ಕುಮಾರ್ ಅವರ ತಾಯಿ ಮೋಹಿನಿ ಮಣಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ತಾಯಿಯನ್ನು ಕಳೆದುಕೊಂಡು ದುಃಖದಲ್ಲಿರುವ ಅಜಿತ್ ಹಾಗೂ ಅವರ ಕುಟುಂಬಕ್ಕೆ ನನ್ನ ಸಾಂತ್ವನ’ ಎಂದು ಕಮಲ್ ಹಾಸನ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಸರಿಯಾಗಿ ವರ್ತಿಸಿ, ಇದು ಥಿಯೇಟರ್ ಅಲ್ಲ’; ಅಭಿಮಾನಿಗಳ ಮೇಲೆ ಕೂಗಾಡಿದ ನಟ ಅಜಿತ್

ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡಿನ ಮಾಜಿ ಸಿಎಂ ಎಂ.ಕೆ. ಸ್ಟಾಲಿನ್, ಬಿಜೆಪಿ ನಾಯಕ ಕೆ. ಅಣ್ಣಾಮಲೈ ಸೇರಿದಂತೆ ಅನೇಕರು ಅಜಿತ್ ತಾಯಿ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಅಜಿತ್ ಕೊನೆಯದಾಗಿ ಕಾಣಿಸಿಕೊಂಡಿದ್ದು ಕಳೆದ ವರ್ಷ ರಿಲೀಸ್ ಆದ ‘ವಿದುಮುಯಾರ್ಚಿ’ ಹಾಗೂ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದಲ್ಲಿ. ಸದ್ಯಕ್ಕೆ ಅವರು ತಮ್ಮ ಮುಂದಿನ ಸಿನಿಮಾಗಳ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಅವರಿಗೆ ಕಾರ್ ರೇಸ್ ಎಂದರೆ ಇಷ್ಟ. ಅವರು ತಮ್ಮದೇ ತಂಡ ಆರಂಭಿಸಿದ್ದು, ಇದರಲ್ಲೇ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 12:26 pm, Sat, 30 May 26

Source link

Leave a Reply

Your email address will not be published. Required fields are marked *