IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಸನ್ ರೈಸರ್ಸ್ ಹೈದರಾಬಾದ್ (SRH) ತಂಡದ ಗೆಲುವಿನ ನಾಗಾಲೋಟ ಮುಂದುವರಿದಿದೆ. ಈ ಗೆಲುವುಗಳೊಂದಿಗೆ ಎಸ್ಆರ್ಹೆಚ್ ಪಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅದು ಕೂಡ ಅಗ್ರಸ್ಥಾನದಲ್ಲಿದ್ದ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ. ಹೈದರಾಬಾದ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಸ್ಆರ್ಹೆಚ್ ತಂಡ 20 ಓವರ್ಗಳಲ್ಲಿ 235 ರನ್ ಕಲೆಹಾಕಿದ್ದರು.
ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 20 ಓವರ್ಗಳಲ್ಲಿ 202 ರನ್ಗಳಿಸಿ 33 ರನ್ಗಳಿಂದ ಸೋಲೊಪ್ಪಿಕೊಂಡಿದೆ. ಈ ಗೆಲುವಿನೊಂದಿಗೆ ಸನ್ರೈಸರ್ಸ್ ಹೈದರಾಬಾದ್ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.
ಇನ್ನು ಈ ಪಂದ್ಯದ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿಗಾಗಿ ಎಸ್ಆರ್ಹೆಚ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅವರನ್ನು ಕರೆಯಲಾಯಿತು. ಈ ಆಹ್ವಾನ ನೋಡಿ ಖುದ್ದು ಕಮಿನ್ಸ್ ಅಚ್ಚರಿಗೊಂಡರು. ಏಕೆಂದರೆ ಈ ಮ್ಯಾಚ್ನಲ್ಲಿ ಪ್ಯಾಟ್ ಕಮಿನ್ಸ್ ಬ್ಯಾಟ್ ಮಾಡಿರಲಿಲ್ಲ. ಇನ್ನು ಪಡೆದಿರುವುದು ಕೇವಲ 2 ವಿಕೆಟ್ ಮಾತ್ರ.
ಇದಾಗ್ಯೂ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಆಯ್ಕೆಯಾದ ಪ್ಯಾಟ್ ಕಮಿನ್ಸ್ “ನನಗೆ ಈ ಪ್ರಶಸ್ತಿ ಏಕೆ ನೀಡಲಾಗುತ್ತಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪಂಜಾಬ್ ಕಿಂಗ್ಸ್ ತಂಡದ ಕೂಪರ್ ಕೊನೊಲಿ ಈ ಪಂದ್ಯದಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದರು/ ಬಹುಶಃ ಅದು ಅವರಿಗೆ ಸಲ್ಲಬೇಕಿತ್ತು, ಎಂದು ಹೇಳುವ ಮೂಲಕ ಕ್ರೀಡಾ ಸ್ಫೂರ್ತಿ ಮೆರೆದರು.
ಆದರೆ ಇಲ್ಲಿ ಪ್ಯಾಟ್ ಕಮಿನ್ಸ್ ಅವರನ್ನು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಆಯ್ಕೆ ಮಾಡಲು ಮುಖ್ಯ ಕಾರಣ ಅವರು ಪವರ್ಪ್ಲೇನಲ್ಲಿ ಎಸೆದ ಓವರ್ಗಳು. ಮೊದಲ ಓವರ್ನಲ್ಲೇ ಡೇಂಜರಸ್ ಪ್ರಿಯಾಂಶ್ ಆರ್ಯ ವಿಕೆಟ್ ಪಡೆದಿದ್ದ ಕಮಿನ್ಸ್, ಆ ಬಳಿಕ ಸುರ್ಯಾಂಶ್ ಶೆಡ್ಗೆ ಅವರನ್ನು ಔಟ್ ಮಾಡಿದ್ದರು.
ಇದನ್ನೂ ಓದಿ: ಪಾಕಿಸ್ತಾನಕ್ಕೆ ಮುಖಭಂಗ: IPL ಆಡ್ತೀವಿ ಎಂದ ಆಸ್ಟ್ರೇಲಿಯಾ ಆಟಗಾರರು!
ಅಲ್ಲದೆ 4 ಓವರ್ಗಳಲ್ಲಿ ಕೇವಲ 34 ರನ್ ನೀಡಿ ಪಂದ್ಯದ ಮೇಲೆ ಹಿಡಿತ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದರ ನಡುವೆ ಎರಡು ಅದ್ಭುತ ಕ್ಯಾಚ್ಗಳನ್ನು ಸಹ ಹಿಡಿದಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ಪ್ಯಾಟ್ ಕಮಿನ್ಸ್ ಅವರನ್ನು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು.
ಇದಾಗ್ಯೂ ಈ ಮ್ಯಾಚ್ನಲ್ಲಿ ಭರ್ಜರಿ ಶತಕ ಸಿಡಿಸಿದ್ದ 22 ವರ್ಷದ ಕೂಪರ್ ಕೊನೊಲಿಗೆ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಅರ್ಹರು ಎಂಬುದನ್ನು ಖುದ್ದು ಪ್ಯಾಟ್ ಕಮಿನ್ಸ್ ಹೇಳಿದ್ದಾರೆ. ಆದರೆ ಸೋತ ಪಂದ್ಯಗಳಲ್ಲಿ ಮಿಂಚಿದ ಆಟಗಾರರಿಗೆ ಐಪಿಎಲ್‌ನಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಗುವುದು ವಿರಳ. ಈ ಸಂಪ್ರದಾಯ ಮುಂದೆಯಾದರೂ ಬದಲಾಗಲಿದೆಯಾ ಕಾದು ನೋಡಬೇಕಿದೆ.
SRH ತಂಡದ ‘ಸ್ಪೆಷಲ್ 7’:
ಈ ಬಾರಿಯ ಐಪಿಎಲ್‌ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಗೆಲುವಿನ ಹಿಂದೆ ಒಬ್ಬರೇ ಆಟಗಾರನಿಲ್ಲ. ತಂಡ ಸಾಧಿಸಿದ 7 ಗೆಲುವುಗಳಲ್ಲಿ 7 ಬೇರೆ ಬೇರೆ ಆಟಗಾರರು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿರುವುದು ಈ ತಂಡದ ಬಲವನ್ನು ತೋರಿಸುತ್ತದೆ. ಹೀಗೆ ಎಸ್ಆರ್ಹೆಚ್ ಪರ ಪ್ಲೇಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…
- ಅಭಿಷೇಕ್ ಶರ್ಮಾ
- ಟ್ರಾವಿಸ್ ಹೆಡ್
- ಹೆನ್ರಿಕ್ ಕ್ಲಾಸನ್
- ಇಶಾನ್ ಕಿಶನ್
- ನಿತೀಶ್ ಕುಮಾರ್ ರೆಡ್ಡಿ
- ಈಶಾನ್ ಮಾಲಿಂಗ
- ಪ್ಯಾಟ್ ಕಮ್ಮಿನ್ಸ್
