ಬೆಂಗಳೂರು, ಜೂನ್ 04: ಬ್ಲೂ ಲೈನ್ (Blue Line Metro) ಬೆಂಗಳೂರಿಗರ ಬಹುನಿರೀಕ್ಷಿತ ನಮ್ಮ ಮೆಟ್ರೋ ಮಾರ್ಗ. ಈ ವರ್ಷ ಡಿಸೆಂಬರ್ನಲ್ಲಿ ಓಪನ್ ಮಾಡಲು ಬಿಎಂಆರ್ಸಿಎಲ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಬೆನ್ನಲ್ಲೇ ಕೆಂಪೇಗೌಡ ಏರ್ಪೋರ್ಟ್ (Kempegowda International Airport) ಮಾರ್ಗಕ್ಕೆ ಮೊದಲ ರೈಲು ಬಂದಿದೆ. ಇಂದು ಬೆಳಿಗ್ಗೆ ಬೈಯಪ್ಪನಹಳ್ಳಿ ಡಿಪೋಗೆ ಟ್ರೈನ್ ಸೆಟ್ ತಲುಪಿದೆ. ಆ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ.
ಮುಖ್ಯಾಂಶಗಳು
- ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್
- ಬ್ಲೂ ಲೈನ್ ಮೆಟ್ರೋ ಮಾರ್ಗದ ಮೊದಲ ರೈಲು ನಗರಕ್ಕೆ ಎಂಟ್ರಿ
- ಇಂದು ಬೆಳಿಗ್ಗೆ ಬೈಯಪ್ಪನಹಳ್ಳಿ ಡಿಪೋ ತಲುಪಿದ ಟ್ರೈನ್ ಸೆಟ್
ಬ್ಲೂ ಲೈನ್ ಮೆಟ್ರೋ ಮಾರ್ಗವು ಸಿಲ್ಕ್ ಬೋರ್ಡ್ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಸಂಪರ್ಕ ಕಲ್ಪಿಸಲಿದ್ದು, ಇದು ನಗರದ ಜನರಿಗೆ ಮತ್ತು ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. 58.19 ಕಿಮೀ ವಿಸ್ತೀರ್ಣದ ಬ್ಲೂ ಲೈನ್ ಮೆಟ್ರೋ ಮಾರ್ಗಕ್ಕೆ ಬೆಂಗಳೂರಿನ ಬೆಮಲ್ನಲ್ಲಿ ರೈಲುಗಳನ್ನು ಆರ್ಡರ್ ಮಾಡಲಾಗಿದೆ. ಈ ಮಾರ್ಗಕ್ಕಾಗಿ 38 ಡ್ರೈವರ್ ಲೆಸ್ ರೈಲುಗಳಿಗಾಗಿ ಆರ್ಡರ್ ನೀಡಲಾಗಿದೆ. ಬ್ಲೂ ಲೈನ್ಗೆ ಇನ್ನು ಎರಡು ಮೆಟ್ರೋ ರೈಲು ಬರಬೇಕಿದೆ. ಈ ವರ್ಷ ಡಿಸೆಂಬರ್ನಲ್ಲಿ 19.75 ಕಿಮೀ ಉದ್ದದ ಸಿಲ್ಕ್ ಬೋರ್ಡ್ನಿಂದ ಕೆ.ಆರ್. ಪುರದವರೆಗಿನ ಮೊದಲ ಹಂತವನ್ನು ಆರಂಭಿಸಲು ಬಿಎಂಆರ್ಸಿಎಲ್ ಸಿದ್ಧತೆ ನಡೆಸಿದೆ.
ಇದನ್ನೂ ಓದಿ: ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್, ಬುಧವಾರದಿಂದ 2 ಹೆಚ್ಚುವರಿ ರೈಲು ಸೇರ್ಪಡೆ
ಸಿಲ್ಕ್ ಬೋರ್ಡ್ ಟು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಮೆಟ್ರೋ 58.19 ಕಿಮೀ ವಿಸ್ತೀರ್ಣವಿದ್ದು, ಈ ಮಾರ್ಗದಲ್ಲಿ 30 ಮೆಟ್ರೋ ಸ್ಟೇಷನ್ಗಳಿರಲಿವೆ. ಸೆಂಟ್ರಲ್ ಸಿಲ್ಕ್ ಬೋರ್ಡ್ ನಿಂದ ಕೆ.ಆರ್ ಪುರ 19.75 ಕಿಮೀ ಮಾರ್ಗದಲ್ಲಿ 13 ಸ್ಟೇಷನ್ಗಳಿರಲಿದ್ದು, ಕೆ.ಆರ್ ಪುರ ಟು ಏರ್ಪೋರ್ಟ್ವರೆಗೆ 38.44 ಕಿಮೀ ಮಾರ್ಗದಲ್ಲಿ 17 ಮೆಟ್ರೋ ಸ್ಟೇಷನ್ ಗಳಿರಲಿವೆ. ನೀಲಿ ಮಾರ್ಗವನ್ನು ಬರೋಬ್ಬರಿ 14,788 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 3:58 pm, Thu, 4 June 26