ಬೆಂಗಳೂರು, ಜುಲೈ 15: ‘‘ತಾಯಂದಿರು ಅಧಿಕಾರಿಗಳಿಗೆ ಪೊರಕೆಯಿಂದ ಹೊಡೆಯುವ ಅವಶ್ಯಕತೆ ಇಲ್ಲ, ಬೇಕಾದರೆ ನನಗೆ ಹೊಡೆಯಿರಿ’’ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬಿಡದಿ ಟೌನ್ಶಿಪ್ (Bidadi Township) ಕುರಿತ ಸರ್ವೆಗೆ ಹೋಗಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರವಾಗಿ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಬಿಡದಿಯಲ್ಲಿ ನಡೆದ ಘಟನೆಯಿಂದ ಮನಸ್ಸಿಗೆ ನೋವಾಗಿದೆ. ಪೊರಕೆಯಿಂದ ಅಧಿಕಾರಿಗಳಿಗೆ ಹೊಡೆಯುವ ಅವಶ್ಯಕತೆ ಇಲ್ಲ. ಬೇಕಾದರೆ ನನಗೆ ಹೊಡೆಯಲಿ, ನಾನು ಹೊಡಿಸಿಕೊಳ್ಳುವುದಕ್ಕೆ ರೆಡಿ ಇದ್ದೇನೆ. ಬಲವಂತವಾಗಿ ಜಮೀನು ತೆಹೆದುಕೊಳ್ಳುವ ಅವಶ್ಯಕತೆ ನಮ್ಮ ಸರ್ಕಾರಕ್ಕಿಲ್ಲ’’ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
