Headlines

ನಾಯಕರೊಂದಿಗೆ ಹಾಸಿಗೆ ಹಂಚಿಕೊಳ್ಳದೆ ಮಹಿಳೆಯರು ರಾಜಕೀಯಕ್ಕೆ ಬರುವುದು ಅಸಾಧ್ಯ; ನಾಲಿಗೆ ಹರಿಬಿಟ್ಟ ಪಪ್ಪು ಯಾದವ್ – Kannada News | Women cannot enter politics without entering Male Leader Room Pappu Yadav controversial remarks

ನವದೆಹಲಿ, ಏಪ್ರಿಲ್ 21: ಸ್ವತಂತ್ರವಾಗಿ ಸ್ಪರ್ಧಿಸಿ ಬಿಹಾರದ ಸಂಸದರಾಗಿರುವ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ (Pappu Yadav) ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಭಾರೀ ಸುದ್ದಿಯಲ್ಲಿದ್ದಾರೆ. ಮಹಿಳೆಯರು ರಾಜಕೀಯಕ್ಕೆ ಬರುವುದು ಬಹಳ ಕಷ್ಟ. ಶೇ. 90ರಷ್ಟು ಮಹಿಳೆಯರು ಹಿರಿಯ ನಾಯಕರ ರೂಂನೊಳಗೆ ಹೋಗಿ ಅವರೊಂದಿಗೆ ಮಂಚ ಹಂಚಿಕೊಳ್ಳದೆ ರಾಜಕಾರಣಿಯಾಗಲು ಸಾಧ್ಯವಿಲ್ಲ. ಬಹುತೇಕ ಮಹಿಳೆಯರು ಹಿರಿಯರ ರಾಜಕಾರಣಿಗಳೊಂದಿಗೆ ಲೈಂಗಿಕತೆಯ ರಾಜಿ ಮಾಡಿಕೊಂಡಿರುತ್ತಾರೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪಪ್ಪು ಯಾದವ್ ಅವರಿಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.

ಮಹಿಳೆಯರು ರಾಜಕೀಯ ಜೀವನವನ್ನು ಹೇಗೆ ಪ್ರವೇಶಿಸುತ್ತಾರೆ ಎಂಬುದರ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ಒಳಗೊಂಡಿರುವ ಈ ಹೇಳಿಕೆಗಳಿಗೆ ವಿವಿಧ ವಲಯಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಶೇ. 90ರಷ್ಟು ಮಹಿಳಾ ರಾಜಕಾರಣಿಗಳ ವೃತ್ತಿಜೀವನವು ಹಿರಿಯ ನಾಯಕರ ರೂಂನಿಂದ ಪ್ರಾರಂಭವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್​ ಕೇಸ್​ನಿಂದ ದೂರವಿರು; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನಿಂದ ಪಪ್ಪು ಯಾದವ್​ಗೆ ಜೀವ ಬೆದರಿಕೆ

ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಮತ್ತು ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 816ಕ್ಕೆ ಹೆಚ್ಚಿಸುವ ಸರ್ಕಾರದ ಸಂವಿಧಾನ (131 ನೇ ತಿದ್ದುಪಡಿ) ಮಸೂದೆ ಕಳೆದ ಶುಕ್ರವಾರ ಲೋಕಸಭೆಯಲ್ಲಿ ಸೋತ ನಂತರ ಅವರ ಈ ಹೇಳಿಕೆ ಬಂದಿದೆ.

ಮಾಧ್ಯಮ ಸಂವಾದದ ಸಂದರ್ಭದಲ್ಲಿ ರಾಜಕೀಯದಲ್ಲಿರುವ ಮಹಿಳೆಯರ ಬಗ್ಗೆ ಈ ರೀತಿ ಅವಮಾನಕರ ಹೇಳಿಕೆ ನೀಡಿದ್ದಕ್ಕಾಗಿ ಬಿಹಾರದ ರಾಜ್ಯ ಮಹಿಳಾ ಆಯೋಗವು ಸಂಸದ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರಿಗೆ ನೋಟಿಸ್ ನೀಡಿದೆ. “ಪೂರ್ನಿಯಾ ಸಂಸದರು ನೀಡಿದ ಆಕ್ಷೇಪಾರ್ಹ ಹೇಳಿಕೆಗಳನ್ನು ನಾವು ಸ್ವಯಂಪ್ರೇರಿತವಾಗಿ ಸ್ವೀಕರಿಸಿದ್ದೇವೆ. ಅವರಿಂದ ಉತ್ತರ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಆಯೋಗದ ಅಧ್ಯಕ್ಷೆ ಅಪ್ಸರಾ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿಗೆ ವಿರೋಧಿಸಿದ್ದಕ್ಕೆ ವಿಪಕ್ಷ ಬೆಲೆ ತೆರಬೇಕಾಗುತ್ತದೆ; ಪಿಎಂ ಮೋದಿ ವಾಗ್ದಾಳಿ

“ರಾಜಕೀಯದಲ್ಲಿ ಕೆಲಸ ಮಾಡುವ ಮಹಿಳೆಯರು ರಾಜಕಾರಣಿಯೊಂದಿಗೆ ಹಾಸಿಗೆ ಹಂಚಿಕೊಳ್ಳುವುದರಿಂದ ಮಾತ್ರ ರಾಜಕೀಯಕ್ಕೆ ಪ್ರವೇಶ ಪಡೆಯಲು ಸಾಧ್ಯ ಎಂದು ನೀವು ಹೇಳಿದ್ದೀರಿ. ಇದು ಮಹಿಳೆಯರ ಆತ್ಮಗೌರವ ಮತ್ತು ಸಾಮಾಜಿಕ ಘನತೆಗೆ ತೀವ್ರ ಹಾನಿಯನ್ನುಂಟುಮಾಡುತ್ತದೆ” ಎಂದು ಆಯೋಗದ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಸಂಸದ ಪಪ್ಪು ಯಾದವ್ ಅವರಿಂದ ವಿವರಣೆಯನ್ನು ಕೋರಿದೆ. ಪಪ್ಪು ಯಾದವ್‌ಗೆ ನೀಡಿದ ನೋಟಿಸ್‌ನಲ್ಲಿ ಆಯೋಗವು ಲೋಕಸಭಾ ಸ್ಪೀಕರ್‌ಗೆ ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಏಕೆ ಶಿಫಾರಸು ಮಾಡಬಾರದು ಎಂದು ಕೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:13 pm, Tue, 21 April 26

Source link

Leave a Reply

Your email address will not be published. Required fields are marked *