ನವದೆಹಲಿ, ಮೇ 19: ದೇಶಾದ್ಯಂತ ಸಾರ್ವಜನಿಕ ಸ್ಥಳಗಳು ಮತ್ತು ರಸ್ತೆಗಳಿಂದ ಬೀದಿ ನಾಯಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವ ಹಾಗೂ ಅವುಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಅತ್ಯಂತ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಾನು ನವೆಂಬರ್ 2025 ರಲ್ಲಿ ನೀಡಿದ್ದ ಐತಿಹಾಸಿಕ ಆದೇಶವನ್ನು ಮಾರ್ಪಡಿಸಲು ಅಥವಾ ಹಿಂಪಡೆಯಲು ಕೋರಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ನ್ಯಾಯಾಲಯವು ಸಂಪೂರ್ಣವಾಗಿ ವಜಾಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ಉಪಸ್ಥಿತಿಯು ಮತ್ತು ಅವುಗಳ ಜನಸಂಖ್ಯೆ ಹೆಚ್ಚುತ್ತಿರುವುದು ಅತ್ಯಂತ ಆತಂಕಕಾರಿ ಎಂದು ನ್ಯಾಯಾಲಯ ಬಣ್ಣಿಸಿದೆ.
ಪ್ರಾಣಿ ಹಕ್ಕುಗಳ ಕಾರ್ಯಕರ್ತರ ವಾದ ತಳ್ಳಿಹಾಕಿದ ಕೋರ್ಟ್
ಸಾರ್ವಜನಿಕ ಸ್ಥಳಗಳಿಂದ ಹಿಡಿದುಕೊಂಡು ಹೋಗುವ ಬೀದಿ ನಾಯಿಗಳಿಗೆ ಕ್ರಿಮಿನಾಶಕ (Sterilization) ಚಿಕಿತ್ಸೆ ನೀಡಿದ ನಂತರ, ಅವುಗಳನ್ನು ಮತ್ತೆ ಅದೇ ಹಳೆಯ ಸ್ಥಳಗಳಿಗೆ ಬಿಡಬಾರದು ಎಂದು ನ್ಯಾಯಾಲಯ ಈ ಹಿಂದೆ ಆದೇಶಿಸಿತ್ತು. ಆದರೆ, ನಾಯಿಗಳನ್ನು ಬೇರೆ ಸ್ಥಳಗಳಿಗೆ ಸ್ಥಳಾಂತರಿಸುವುದರಿಂದ ಅವುಗಳು ದಿಗ್ಭ್ರಮೆಗೊಳ್ಳಬಹುದು, ಗೊಂದಲಕ್ಕೊಳಗಾಗಬಹುದು ಮತ್ತು ಇದರಿಂದ ಜನರ ಮೇಲಿನ ದಾಳಿಗಳು ಮತ್ತಷ್ಟು ಹೆಚ್ಚಾಗಬಹುದು ಎಂದು ಪ್ರಾಣಿ ಹಕ್ಕುಗಳ ಕಾರ್ಯಕರ್ತರು ನ್ಯಾಯಾಲಯದಲ್ಲಿ ವಾದಿಸಿದ್ದರು.
ಆದರೆ, ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರಿದ್ದ ತ್ರಿಸದಸ್ಯ ಪೀಠವು ಈ ವಾದವನ್ನು ಒಪ್ಪಲು ನಿರಾಕರಿಸಿತು.
ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ
