Headlines

ನಾಲ್ಕು ದಿನಗಳಿಂದ ವಿದ್ಯುತ್ ಕಡಿತ: ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು – Kannada News | HESCOM Faces Anger as Hubballis Gandhinagar Endures Prolonged Power Cut

ಹುಬ್ಬಳ್ಳಿ, ಮೇ.21: ನಗರದ ಗಾಂಧಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ವಿದ್ಯುತ್ ಕಡಿತದಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಮತ್ತು ಮರಗಳು ನೆಲಕ್ಕುರುಳಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಇಲ್ಲದ ಕಾರಣ ಕುಡಿಯುವ ನೀರಿಗೂ, ಶೌಚಾಲಯಕ್ಕೂ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ಹೆಸ್ಕಾಂ (HESCOM) ಅಧಿಕಾರಿಗಳು ಮತ್ತು ಪಾಲಿಕೆಯ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರಗಳನ್ನು ತೆರವುಗೊಳಿಸುವಲ್ಲಿ ಮತ್ತು ವಿದ್ಯುತ್ ಕಂಬಗಳನ್ನು ಸರಿಪಡಿಸುವಲ್ಲಿ ವಿಳಂಬವಾಗಿದೆ. ರಾತ್ರಿ ಹೊತ್ತು ಮನೆಯಲ್ಲಿ ಇರಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನಿವಾಸಿಗಳು ಗೋಳು ತೋಡಿಕೊಂಡಿದ್ದಾರೆ. ಜನಪ್ರತಿನಿಧಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಜನರ ಅಹವಾಲು ಆಲಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *