Headlines

ನಾಳೆ ಕೊಪ್ಪಳ ಬಂದ್​​ ಹಿನ್ನೆಲೆ ಖಾಸಗಿ ಶಾಲೆಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ – Kannada News | Koppal Bandh Tomorrow Over Baldota Factory Issue; Schools Shut, University Exams Postponed

ಕಾರ್ಖಾನೆ ವಿರೋಧಿಸಿ ಈ ಹಿಂದೆ ನಡೆದ ಹೋರಾಟImage Credit source: Google

ಕೊಪ್ಪಳ, ಫೆಬ್ರವರಿ 23: ಬಲ್ಡೋಟಾ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಒಂದು ವರ್ಷ ಪೂರೈಸಿದ ಹಿನ್ನಲೆ ಜಿಲ್ಲಾ‌ ಬಚಾವೋ ಆಂದೋಲನ‌ ಸಮಿತಿ ಮತ್ತು ಪರಿಸರ ಹಿತರಕ್ಷಣಾ ಸಮಿತಿ ವತಿಯಿಂದ ನಾಳೆ ಕೊಪ್ಪಳ‌ದಲ್ಲಿ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹೋರಾಟದ ಸಂಚಾಲಕ ಮಂಜುನಾಥ್ ಗೊಂಡಬಾಳ, ಕಳೆದ ವರ್ಷ ಫೆಬ್ರವರಿ 24ರಂದು ಗವಿಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ‌ ಸ್ವಾಮೀಜಿ ಬಲ್ಡೋಟಾ ಕಾರ್ಖಾನೆ ಶಾಶ್ವತ ಬಂದ್ ಮಾಡಿಸಬೇಕೆಂದು ಜಿಲ್ಲೆಯ ಜನಪ್ರತಿನಿಧಿಗಳಿಗೆ ಕರೆ ನೀಡಿದ್ದರು. ಆದರೆ ಇಲ್ಲಿಯವರೆಗೂ ಕಾರ್ಖಾನೆ ಶಾಶ್ವತವಾಗಿ ಸ್ಥಗಿತಗೊಂಡಿಲ್ಲ. ಈ ಹಿನ್ನಲೆ ಜಂಟಿ ಕ್ರಿಯಾ ಸಮಿತಿ ಬಂದ್​​ಗೆ ಕರೆ ನೀಡಿದೆ ಎಂದು ತಿಳಿಸಿದ್ದಾರೆ.

ಕಳೆದ 116 ದಿನಗಳಿಂದ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಪ್ರತಿಭಟನೆ ನಡೆಸಿಕೊಂಡುಬಂದಿದ್ದು, ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ರ ವರೆರೆಗೂ ಸ್ವಯಂಪ್ರೇರಿತ ಬಂದ್​​ಗೆಗೆ ಕರೆ ನೀಡಲಾಗಿದೆ. ವಕೀಲರ ಸಂಘ ಸೇರಿ ಹಲವು ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿದ್ದು, ಖಾಸಗಿ ಶಾಲೆಗಳ ಒಕ್ಕೂಟ ಸಹ ಹೋರಾಟಗಾರರ ಬೆನ್ನಿಗೆ ನಿಂತಿದೆ. ಭಾಗ್ಯನಗರದಲ್ಲಿ ಬೆಳಿಗ್ಗೆ 7 ಗಂಟೆಗೆ ಬೈಕ್, ಆಟೋ ರ‍್ಯಾಲಿ ನಡೆಯಲಿದ್ದು, 10 ಗಂಟೆಗೆ ಗವಿ ಮಠದಿಂದ ರ‍್ಯಾಲಿ ಇರಲಿದೆ. ಗಡಿಯಾರ ಕಂಬ, ಅಶೋಕ ವೃತ್ತದ ಮೂಲಕ ನಗರಸಭೆಯ ಪ್ರತಿಭಟನಾ ಸ್ಥಳಕ್ಕೆ ತಲುಪಿ ಅದು ಅಂತ್ಯಗೊಳ್ಳಲಿದೆ. ನಗರಸಭೆ ಮುಂಭಾಗ ವೇದಿಕೆ ಕಾರ್ಯಕ್ರಮ‌ ಜರುಗಲಿದ್ದು, ಸಾಣೆಹಳ್ಳಿ, ಗದಗಿನ ತೋಂಟದಾರ್ಯ ಮಠದ ಸಿದ್ದರಾಮ ಶ್ರೀಗಳು, ಕಬೀರಾನಾನಂದ ಸ್ವಾಮೀಜಿಗಳು, ಪರಿಸರಕ್ಕಾಗಿ ನಾವು ಸಂಘಟನೆಯ ಎ. ಟಿ. ರಾಮಸ್ವಾಮಿ ಅವರು ಈ ವೇಳೆ ಉಪಸ್ಥಿತರಿರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 

ಖಾಸಗಿ ಶಾಲೆಗಳಿಗೆ ರಜೆ, ಕೊಪ್ಪಳ‌ ವಿವಿ ಪರೀಕ್ಷೆ ಮುಂದೂಡಿಕೆ

ಕೊಪ್ಪಳ ಬಂದ್​​ಗೆ ಕರೆ ನೀಡಿರುವ ಹಿನ್ನೆಲೆ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ಶಾಲೆಗಳ ಒಕ್ಕೂಟ ಖಾಸಗಿ ಶಾಲೆಗಳಿಗಸ ರಜೆ ಘೋಷಿಸಿದೆ. ಕೊಪ್ಪಳ‌ ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನೂ ಮುಂದೂಡಿ ‌ವಿವಿ ಪರೀಕ್ಷಾಂಗ ಕುಲಸಚಿವರು ಆದೇಶಿಸಿದ್ದಾರೆ. ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಿಗದಿಯಂತೆ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 5:35 pm, Mon, 23 February 26

Source link

Leave a Reply

Your email address will not be published. Required fields are marked *