ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ – Kannada News | PM Narendra Modi Bengaluru Visit on May 10: HAL Speech and Art of Living Inauguration; Here Are the Details

ಪ್ರಧಾನಿ ನರೇಂದ್ರ ಮೋದಿImage Credit source: tv9 kannada

ಬೆಂಗಳೂರು, ಮೇ 09: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೇ 10ರಂದು ಕರ್ನಾಟಕ್ಕೆ ಆಗಮಿಸುತ್ತಿದ್ದಾರೆ. ಆರ್ಟ್ ಆಫ್ ಲೀವಿಂಗ್ ಆಶ್ರಮದಲ್ಲಿ ಧ್ಯಾನ ಮಂದಿರ ಮತ್ತು ವಿವಿಧ ಕಾರ್ಯಕ್ರಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಈ ನಿಟ್ಟಿನಲ್ಲಿ ನಗರದಲ್ಲಿ ಪೊಲೀಸ ಇಲ್ಲಾಖೆ ಕೂಡ ಎಲ್ಲೆಡೆ ಹದ್ದಿನ ಕಣ್ಣು ಇಟ್ಟಿದೆ.

ಮುಖ್ಯಾಂಶಗಳು

  • ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ
  • ಹೆಚ್‌ಎಎಲ್ ಏರ್‌ಪೋರ್ಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ
  • ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೂ ಭೇಟಿ

ಪ್ರಧಾನಿ ಮೋದಿ ಭೇಟಿ ವಿವರ ಹೀಗಿದೆ

  • ಬೆಳಗ್ಗೆ 9.40ಕ್ಕೆ ದೆಹಲಿಯಿಂದ ಬೆಂಗಳೂರಿಗೆ ಆಗಮನ
  • ಬೆಳಗ್ಗೆ 9.45 ರಿಂದ 10.15ರವರೆಗೆ ಹೆಚ್​​ಎಎಲ್ ಏರ್​​ಪೋರ್ಟ್ ಮುಂಭಾಗ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
  • ನಂತರ ಹೆಚ್​ಎಎಲ್ ಏರ್​​ಪೋರ್ಟ್​ನಿಂದ ಹೆಲಿಕಾಪ್ಟರ್ ಮೂಲಕ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲೀವಿಂಗ್ ಆಶ್ರಮಕ್ಕೆ ತೆರಳಲಿರುವ ಮೋದಿ, ಧ್ಯಾನ ಮಂದಿರ ಮತ್ತು ವಿವಿಧ ಕಾರ್ಯಕ್ರಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಒಂದೂವರೆ ಗಂಟೆ ಕಾಲ ಆಶ್ರಮದಲ್ಲಿ ಇರಲಿದ್ದಾರೆ.
  • ಮಧ್ಯಾಹ್ನ 01.40ಕ್ಕೆ ಬೆಂಗಳೂರಿನಿಂದ ಹೈದರಾಬಾದ್​ಗೆ ನಿರ್ಗಮಿಸಲಿದ್ದಾರೆ.

ಪ್ರಧಾನಿ ಮೋದಿ ಬೆಂಗಳೂರು ಭೇಟಿ ಬಗ್ಗೆ ಆರ್​​ ಅಶೋಕ್​ ಮಾಹಿತಿ

ಇನ್ನು ಪ್ರಧಾನಿ ಮೋದಿ ಬೆಂಗಳೂರು ಭೇಟಿ ಬಗ್ಗೆ ಇತ್ತೀಚೆಗೆ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮಾಹಿತಿ ನಿಡಿದ್ದರು. ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಅಧಿಕಾರಕ್ಕೇರಿದ ಹಿನ್ನೆಲೆ ಹಾಗೂ ಕೇರಳದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಜಯಗಳಿಸಿದ ಹಿನ್ನೆಲೆಯಲ್ಲಿ ಹೆಚ್‌ಎಎಲ್ ವಿಮಾನ ನಿಲ್ದಾಣದ ಪ್ರವೇಶದ್ವಾರದ ಬಳಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದಿದ್ದರು.

ಮೇ 10ರಂದು ಪ್ರಧಾನಿ ಮೋದಿ ಅವರು ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿ ಸೇರುವ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ 10 ರಿಂದ 15 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಮೇ 10ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಏನು ವಿಶೇಷ?

ಇದೊಂದು ಸಂಪೂರ್ಣ ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿದ್ದು, ಬಳಿಕ ಪ್ರಧಾನಿ ಮೋದಿ ಅವರು ರವಿಶಂಕರ್ ಗುರೂಜಿ ಅವರ ಆಶ್ರಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *