ಚೆನ್ನೈ, ಮೇ 6: ಹೊಸ ಪಕ್ಷವಾದ ಟಿವಿಕೆ ಕಟ್ಟಿ, ಮೊದಲ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಸ್ಪರ್ಧಿಸಿದ್ದ ನಟ ಜೋಸೆಫ್ ವಿಜಯ್ (Vijay) ಯಾರೂ ನಿರೀಕ್ಷೆಯೂ ಮಾಡಿರದ ರೀತಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ತಮಿಳುನಾಡಿನ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಟಿವಿಕೆಗೆ ಸರ್ಕಾರ ರಚನೆಗೆ ಬೇಕಾದ ಬಹುಮತವಾದ 118 ಸ್ಥಾನಗಳು ಸಿಕ್ಕಿರಲಿಲ್ಲ. ಹೀಗಾಗಿ, ಅನಿವಾರ್ಯವಾಗಿ ವಿಜಯ್ ಬೇರೆ ಪಕ್ಷಗಳ ಬೆಂಬಲ ಕೋರಿದ್ದರು. ಕಾಂಗ್ರೆಸ್ನ ಬೆಂಬಲದಿಂದ ವಿಜಯ್ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದರು. ಆದರೆ, ತಮಿಳುನಾಡಿನ ರಾಜ್ಯಪಾಲರು ವಿಜಯ್ ನೀಡಿದ ಬಹುಮತದ ಲೆಕ್ಕಾಚಾರದಿಂದ ತೃಪ್ತರಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಕಾರಣದಿಂದ ವಿಜಯ್ ನಾಳೆ ಪ್ರಮಾಣವಚನ ಸ್ವೀಕರಿಸುವುದು ಅನುಮಾನ ಎನ್ನಲಾಗುತ್ತಿದೆ.
ಸುದ್ದಿ ಅಪ್ಡೇಟ್ ಆಗುತ್ತಿದೆ….
Published On – 6:30 pm, Wed, 6 May 26
