ಟೆಲ್ ಅವಿವ್, ಫೆಬ್ರವರಿ 25: ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಮಾನ ನಿಲ್ದಾಣಕ್ಕೇ ಆಗಮಿಸಿ ಆತ್ಮೀಯವಾಗಿ ಸ್ವಾಗತ ನೀಡಿದರು. ಇಂದು ಪ್ರಧಾನಿ ಮೋದಿ (PM Modi in Israel) ಇಸ್ರೇಲ್ ಸಂಸತ್ ಅನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಇಸ್ರೇಲ್ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯೆಂಬ ಹೆಗ್ಗಳಿಕೆಗೂ ಮೋದಿ ಪಾತ್ರರಾಗಲಿದ್ದಾರೆ. ಅದಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನೆತನ್ಯಾಹು ಪ್ರಧಾನಿ ಮೋದಿಯನ್ನು ತಮ್ಮ ಸಹೋದರನಿದ್ದಂತೆ ಎಂದು ಬಣ್ಣಿಸಿದ್ದಾರೆ. ಈ ಮೂಲಕ ಭಾರತ ಮತ್ತು ಇಸ್ರೇಲ್ ನಡುವಿನ ಗೆಳೆತನ, ಬಾಂಧವ್ಯವನ್ನು ಮತ್ತೊಮ್ಮೆ ಜಗತ್ತಿಗೆ ಸಾರಿದ್ದಾರೆ.
ಈ ಸ್ನೇಹದ ಪ್ರತಿಬಿಂಬವಾಗಿ, ಭಾರತ ಮತ್ತು ಇಸ್ರೇಲ್ ತಮ್ಮ ವ್ಯಾಪಾರವನ್ನು ದ್ವಿಗುಣಗೊಳಿಸಿದೆ. ಎರಡೂ ದೇಶಗಳ ನಡುವಿನ ಸಹಕಾರ 3 ಪಟ್ಟು ಹೆಚ್ಚಾಗಿದೆ, ಎರಡೂ ದೇಶಗಳ ನಡುವಿನ ತಿಳುವಳಿಕೆ 4 ಪಟ್ಟು ಹೆಚ್ಚಾಗಿದೆ ಎಂದು ನೆತನ್ಯಾಹು ಹೇಳಿದ್ದಾರೆ. “ಇದು ನಮಗೆ ಹೆಮ್ಮೆಯ ಕ್ಷಣ. ಪ್ರಧಾನಿ ಮೋದಿ ನನ್ನ ಉತ್ತಮ ಸ್ನೇಹಿತ. ನನ್ನ ಗೆಳೆಯ ಎನ್ನುವುದಕ್ಕಿಂತಲೂ ಸಹೋದರ ಎಂದರೂ ತಪ್ಪಾಗಲಾರದು. ಭಾರತದೊಂದಿಗಿನ ವ್ಯಾಪಾರ ದ್ವಿಗುಣಗೊಂಡಿದೆ ಮತ್ತು ಸಹಕಾರ 4 ಪಟ್ಟು ಹೆಚ್ಚಾಗಿದೆ” ಎಂದು ಮೋದಿ ಹೇಳಿದ್ದಾರೆ.
#WATCH | Jerusalem, Israel: Israeli Prime Minister Benjamin Netanyahu says, “…I have to tell you, Narendra, my dear friend, I am deeply, deeply moved by your visit here today. I’ve never been more moved than by your visit here with us, a great friend of Israel, a great champion… pic.twitter.com/rZLEKXhrF8
— ANI (@ANI) February 25, 2026
ಕಳೆದ 9 ವರ್ಷಗಳಲ್ಲಿ ಪ್ರಧಾನಿ ಮೋದಿ ಎರಡನೇ ಬಾರಿಗೆ ಇಸ್ರೇಲ್‌ಗೆ ಆಗಮಿಸಿದ್ದಾರೆ. ಇಸ್ರೇಲ್ ಪ್ರಧಾನಿ ನೆತನ್ಯಾಹು ಮತ್ತು ಅವರ ಪತ್ನಿ ಪ್ರಧಾನಿಯನ್ನು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.
#WATCH | Jerusalem, Israel: Israeli Prime Minister Benjamin Netanyahu says, “It’s been a wondrous friendship, both personally between the two of us and between our two countries and our peoples. Earlier today, my wife Sara and I greeted you at the airport. And just as you came… pic.twitter.com/dc0gj99Wvj
— ANI (@ANI) February 25, 2026
ಇಸ್ರೇಲ್ ಸಂಸತ್ತಿನಲ್ಲಿ “ಮೋದಿ, ಮೋದಿ” ಎಂಬ ಘೋಷಣೆಗಳು ಕೇಳಿಬಂದವು. ನೆಸ್ಸೆಟ್ ಸ್ಪೀಕರ್ ಅಮೀರ್ ಒಹಾನಾ “ಇದು ನಮಗೆ ಹೆಮ್ಮೆಯ ಕ್ಷಣ” ಎಂದು ಹೇಳಿದರು. ಅವರು ಪ್ರಧಾನಿಯನ್ನು “ನಮಸ್ತೆ” ಯೊಂದಿಗೆ ಸ್ವಾಗತಿಸಿದರು. ಈ ವೇಳೆ ಸಂಸತ್ನ ಎಲ್ಲ ಸದಸ್ಯರೂ ಎದ್ದುನಿಂತು ಕೈ ಜೋಡಿಸಿ ನಮಸ್ಕಾರ ಮಾಡಿ ಮೋದಿಯನ್ನು ಸ್ವಾಗತಿಸಿದ್ದು ವಿಶೇಷವಾಗಿತ್ತು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 9:23 pm, Wed, 25 February 26