ಬೆಂಗಳೂರು, ಮೇ 14: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ಗೆ ಮತ್ತೆ ಅವಕಾಶ ನೀಡಿರುವುದಕ್ಕೆ ಬಿಜೆಪಿ ಕೆರಳಿ ಕೆಂಡವಾಗಿದೆ. ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನ ತೀವ್ರವಾಗಿ ಖಂಡಿಸಿದೆ. ಈ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಜಟಾಪಟಿ ಶುರುವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಿಮಗೆ ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ತುಷ್ಠಿಕರಣದ ರಾಜಕಾರಣ ಮಾಡಿರುವವರನ್ನು ಜನರು ಮನೆಗೆ ಕಳುಹಿಸಿದ್ದಾರೆ ಎಂದರು. ದೇಶದಲ್ಲಿ ಈಗಲೂ ಶೇಕಡಾ 80ರಷ್ಟು ಹಿಂದೂಗಳಿದ್ದಾರೆ. ಓಲೈಕೆ ರಾಜಕಾರಣದಿಂದ TMC, DMK ಮನೆಗೆ ಹೋಗಿವೆ. ಕಾಂಗ್ರೆಸ್ ಸ್ಥಿತಿ ಈಗ ಹೇಗಾಗಿದೆ ಎನ್ನುವುದು ಸ್ಪಷ್ಟವಾಗಿದೆ. ಹಿಜಾಬ್ ಧರಿಸುವ ಬಗ್ಗೆ ಪ್ರಕರಣ ಕೋರ್ಟ್ನಲ್ಲಿದೆ. ಕೂಡಲೇ ನಿಮ್ಮ ಆದೇಶ ಹಿಂಪಡೆಯಿರಿ ಎಂದು ಆಗ್ರಹಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
