ನಿರಂತರ ಮಳೆಗೆ ಕುಸಿದ ರಸ್ತೆ: ರಸ್ತೆ ಮಧ್ಯೆ ದೊಡ್ಡ ಕಂದಕ; ಇದು ‘ನರಕದ ಹಾದಿ’ ಎಂದು ನೆಟ್ಟಿಗರ ಆಕ್ರೋಶ – Kannada News | Agra Rain Causes Giant Sinkhole, Road Collapses Days After Construction; Public Outcry

ಆಗ್ರಾ, ಆ.07: ಉತ್ತರ ಪ್ರದೇಶದ ಆಗ್ರಾದಲ್ಲಿ ಸುರಿದ ನಿರಂತರ ಭಾರೀ ಮಳೆಯಿಂದಾಗಿ ಪ್ರಮುಖ ರಸ್ತೆಯೊಂದು ಹಠಾತ್ತನೆ ಕುಸಿದು, ರಸ್ತೆಯ ಮಧ್ಯೆ ಬೃಹತ್ ಆಕಾರದ ಕಂದಕ (ಸಿಂಕ್‌ಹೋಲ್) ನಿರ್ಮಾಣವಾಗಿದೆ. ದಿಢೀರ್ ರಸ್ತೆ ಕುಸಿತದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಆತಂಕಗೊಂಡಿದ್ದು, “ಇದು ನರಕಕ್ಕೆ ಹೋಗುವ ಹಾದಿಯಂತೆ ಕಾಣುತ್ತಿದೆ” ಎಂದು ಸಾರ್ವಜನಿಕರು ಸ್ಥಳೀಯ ಆಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ರಸ್ತೆಯ ತಳಭಾಗದ ಮಣ್ಣು ಕೊಚ್ಚಿಹೋದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ರಸ್ತೆಯ ಮಧ್ಯಭಾಗದಲ್ಲಿ ದೊಡ್ಡ ಮಟ್ಟದ ಗುಂಡಿ ಬಿದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದರ ವೀಡಿಯೊಗಳು ಮತ್ತು ಫೋಟೋಗಳು ವೈರಲ್ ಆಗುತ್ತಿವೆ. ಅಪಾಯವನ್ನು ತಪ್ಪಿಸಲು ಸ್ಥಳೀಯ ಪುರಸಭೆ ಹಾಗೂ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ರಸ್ತೆಗೆ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಸಂಚಾರವನ್ನು ನಿರ್ಬಂಧಿಸಿದ್ದಾರೆ. ಕೋಟಿಗಟ್ಟಲೆ ವೆಚ್ಚದಲ್ಲಿ ಇತ್ತೀಚೆಗಷ್ಟೇ ನಿರ್ಮಿಸಲಾಗಿದ್ದ ರಸ್ತೆ ಒಂದೇ ಮಳೆಗೆ ಹೀಗೆ ಕುಸಿದುಬಿದ್ದಿರುವುದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎಂದು ಸಾರ್ವಜನಿಕರು ಮತ್ತು ವಿಪಕ್ಷ ನಾಯಕರು ಆರೋಪಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *