ಬೆಂಗಳೂರು/ದಾವಣಗೆರೆ, (ಜೂನ್ 25): ಪೋಕ್ಸೋ ಪ್ರಕರಣಕ್ಕೆ (POCSO Case) ನಿರೀಕ್ಷಣಾ ಜಾಮೀನು (anticipatory bail) ಪಡೆದಿದ್ದ ವಚನಾನಂದ ಸ್ವಾಮೀಜಿಗೆ (Vachanananda Swamiji) ಹೈಕೋರ್ಟ್ ( karnataka High Court) ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ದಾಖಲಾಗುವ ಮುನ್ನವೇ ವಚನಾನಂದಶ್ರೀ ನಿರೀಕ್ಷಣಾ ಜಾಮೀನು ಪಡೆದಿದ್ದು, ಇದನ್ನು ಪ್ರಶ್ನಿಸಿ ಬಾಲಕನ ತಾಯಿ ಹೈಕೋರ್ಟ್ ಮೆಟ್ಟಿಲೇರಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಕೇಸ್ ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ನೀಡಿದ್ದು ಸರಿಯಾದ ಕ್ರಮವಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದು, ನಿರೀಕ್ಷಣಾ ಜಾಮೀನು ರದ್ದುಪಡಿಸಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಆದರೆ, ರೆಗ್ಯುಲರ್ ಜಾಮೀನು ಅರ್ಜಿ ಸಲ್ಲಿಸಲು 3 ವಾರಗಳ ಕಾಲಾವಕಾಶ ನೀಡಿದ್ದು, ಅಲ್ಲಿಯವರೆಗೂ ನಿರೀಕ್ಷಣಾ ಜಾಮೀನಿನ ರಕ್ಷಣೆ ಮುಂದುವರಿಯಲಿದೆ. ಹೀಗಾಗಿ ಸ್ವಾಮೀಜಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಸ್ವಾಮೀಜಿ ವಿರುದ್ಧ ಗಂಭೀರ ಸೆಕ್ಷನ್ಗಳುಳ್ಳ ಪೋಕ್ಸೋ ಕೇಸ್ ದಾಖಲಾಗಿದೆ. ಆದರೂ ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದ ಹೈಕೋರ್ಟ್, ವಚನಾನಂದ ಸ್ವಾಮೀಜಿಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ಮುಂದೂಡಿತ್ತು. ಆದ್ರೆ, ಇಂದಿನ ವಿಚಾರಣೆಯಲ್ಲಿ ಸ್ವಾಮೀಜಿಯ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On – 4:41 pm, Thu, 25 June 26
