ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾಮಾ ಹರೀಶ್ ಅವರ ಪುತ್ರ ಉಲ್ಲಾಸ್ ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 29 ವರ್ಷ ವಯಸ್ಸಾಗಿತ್ತು. ಉಲ್ಲಾಸ್ ಅವರು ಶಿವಮೊಗ್ಗದ ಕೊಡಚಾದ್ರಿಗೆ ಟ್ರೆಕ್ಕಿಂಗ್ ಎಂದು ತೆರಳಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಉಲ್ಲಾಸ್ ಅವರಿಗೆ ಮದುವೆ ನಿಶ್ಚಯವಾಗಿತ್ತು. ಕೆಲವೇ ದಿನಗಳಲ್ಲಿ ಮದುವೆ ನಡೆಯಲಿದ್ದು, ಅಷ್ಟರಲ್ಲಿ ಉಲ್ಲಾಸ್ ನಿಧನ ಹೊಂದಿದ್ದಾರೆ.
ಉಲ್ಲಾಸ್ ಅವರಿಗೆ ಡಿಸೆಂಬರ್ ತಿಂಗಳಲ್ಲಿ ಮದುವೆ ನಿಶ್ಚಯವಾಗಿತ್ತು. ಇತ್ತೀಚೆಗಷ್ಟೆ ನಿಶ್ಚಿತಾರ್ಥವೂ ನಡೆದಿತ್ತು. ಆದರೆ ಇದೀಗ ಹಠಾತ್ತನೆ ಉಲ್ಲಾಸ್ ನಿಧನ ಹೊಂದಿದ್ದಾರೆ. ಕೊಡಚಾದ್ರಿ ಬೆಟ್ಟಕ್ಕೆ ಗೆಳೆಯರೊಟ್ಟಿಗೆ ಚಾರಣಕ್ಕಾಗಿ ಹೋಗಿದ್ದಾಗ ಅವರಿಗೆ ಹೃದಯಾಘಾತವಾಗಿದೆ. ಅವರ ಮೃತದೇಹವನ್ನು ಬೆಂಗಳೂರಿಗೆ ತರಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Published On – 2:40 pm, Sat, 27 June 26