Headlines

ನೀಟ್ ಮರು ಪರೀಕ್ಷೆಗೂ ಮುನ್ನ ‘ಟೆಲಿಗ್ರಾಮ್’ ನಿಷೇಧ ಮುಂದುವರಿಕೆ: ಕೇಂದ್ರದ ನಿರ್ಧಾರ ಎತ್ತಿಹಿಡಿದ ದೆಹಲಿ ಹೈಕೋರ್ಟ್ – Kannada News | NEET Re Exam 2026: Delhi HC Upholds Telegram Ban to Prevent Paper Leaks

ನವದೆಹಲಿ, ಜೂನ್ 19: ಜೂನ್ 21 ರಂದು ದೇಶಾದ್ಯಂತ ನಡೆಯಲಿರುವ ನೀಟ್-ಯುಜಿ (NEET-UG 2026) ಮರು ಪರೀಕ್ಷೆಗೆ ಕೇವಲ ಐದು ದಿನಗಳ ಮುನ್ನ, ಜನಪ್ರಿಯ ಆ್ಯಪ್ ಆದ ‘ಟೆಲಿಗ್ರಾಮ್’ (Telegram)ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ.

ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ಜೂನ್ 22 ರವರೆಗೆ ಟೆಲಿಗ್ರಾಮ್ ಆ್ಯಪ್ ಅನ್ನು ದೇಶದಲ್ಲಿ ನಿರ್ಬಂಧಿಸಿರುವ ಕೇಂದ್ರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿತ್ತು. ಆದರೆ ಹೈಕೋರ್ಟ್ ಟೆಲಿಗ್ರಾಮ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಶ್ನೆಪತ್ರಿಕೆ ಸೋರಿಕೆಗೆ ಬ್ರೇಕ್: ಪರೀಕ್ಷೆಯ ಸಮಯದಲ್ಲಿ ಯಾವುದೇ ರೀತಿಯ ಪರೀಕ್ಷಾ ಸಾಮಗ್ರಿಗಳ ಸಂಭಾವ್ಯ ಸೋರಿಕೆ ಅಥವಾ ಸಂದೇಶ ವೇದಿಕೆಯ ದುರುಪಯೋಗವನ್ನು ತಡೆಗಟ್ಟಲು ಈ ತಾತ್ಕಾಲಿಕ ನಿಷೇಧದ ಕ್ರಮವು ಸಂಪೂರ್ಣವಾಗಿ ಸಮರ್ಥನೀಯವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

ಮತ್ತಷ್ಟು ಓದಿ: NEET UG Re Exam 2026 Date: ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಸಮಗ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಇಂತಹ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯ ಎಂಬ ಕೇಂದ್ರ ಸರ್ಕಾರದ ವಾದವನ್ನು ನ್ಯಾಯಾಲಯವು ಒಪ್ಪಿಕೊಂಡಿದೆ.

ಮುಂದಿನ ನಡೆ ಏನು?
ಜೂನ್ 22 ರವರೆಗೆ ನಿಷೇಧ: ಈ ತಾತ್ಕಾಲಿಕ ನಿಷೇಧದ ಕಾನೂನುಬದ್ಧತೆ ಮತ್ತು ಅಗತ್ಯತೆಯ ಕುರಿತು ಉಭಯ ಪಕ್ಷಗಳ ಸುದೀರ್ಘ ವಾದಗಳನ್ನು ಆಲಿಸಿದ ನ್ಯಾಯಾಲಯವು ತನ್ನ ತೀರ್ಪನ್ನು ಪ್ರಕಟಿಸಿದೆ. ಇದರ ಅನ್ವಯ ನೀಟ್ ಮರು ಪರೀಕ್ಷೆ ಮುಗಿಯುವವರೆಗೆ ಅಂದರೆ ಜೂನ್ 22 ರವರೆಗೆ ದೇಶದಲ್ಲಿ ಟೆಲಿಗ್ರಾಮ್ ಸೇವೆಗಳ ಮೇಲಿನ ನಿರ್ಬಂಧ ಮುಂದುವರೆಯಲಿದೆ.

ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ನೀಟ್ ಪರೀಕ್ಷೆಯ ಭದ್ರತೆಗಾಗಿ ಸರ್ಕಾರ ಕೈಗೊಂಡಿರುವ ಈ ಕಠಿಣ ಹೆಜ್ಜೆಗೆ ಈಗ ಕಾನೂನಿನ ಬಲ ಸಿಕ್ಕಂತಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *