Headlines

ನೀಟ್​​ ವಿಚಾರವಾಗಿ ರಾಜ್ಯದಲ್ಲಿ ಹೋರಾಟ: ಕಾಂಗ್ರೆಸ್​​ಗೆ 2016ರ ಇತಿಹಾಸ ನೆನಪಿಸಿ ತಿವಿದ ಜೆಡಿಎಸ್​​ – Kannada News | NEET Row: JDS Revives 2016 PUC Paper Leak, Calls Congress’ Exam Outrage Pure Hypocrisy

ನೀಟ್​​ ವಿಚಾರವಾಗಿ ಹೋರಾಟ: ಕಾಂಗ್ರೆಸ್​​ಗೆ 2016ರ ಇತಿಹಾಸ ನೆನಪಿಸಿದ JDSImage Credit source: PTI and JDS X Page

ಬೆಂಗಳೂರು, ಜುಲೈ 23: ನೀಟ್​​ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​​ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಕಾಂಗ್ರೆಸ್​​ ಸೇರಿ ಇತರ ಪಕ್ಷ ಮತ್ತು ಸಂಘಟನೆಗಳು ಹೋರಾಟ ನಡೆಸುತ್ತಿವೆ. ಕರ್ನಾಟಕದಲ್ಲಿಯೂ ಈ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್​​ನ ಕಾರ್ಯಕರ್ತರು ಪ್ರೊಟೆಸ್ಟ್​​ ನಡೆಸುತ್ತಿದ್ದಾರೆ. ಈ ನಡುವೆ ‘ಕೈ’ ನಾಯಕರಿಗೆ 2016ರ ಇತಿಹಾಸವನ್ನು ಜೆಡಿಎಸ್​​ ನೆನಪಿಸಿದೆ. ಬೇರೆಯವರ ಕಣ್ಣಿನ ಕಸ ಹುಡುಕುವ ಮುನ್ನ, ನಿಮ್ಮ ಕಣ್ಣಿನ ದಿಮ್ಮಿಯನ್ನು ತೆಗೆಯಿರಿ ಎಂದು ಎಕ್ಸ್​​ ಪೋಸ್ಟ್​​ ಮೂಲಕ ವ್ಯಂಗ್ಯವಾಡಿದೆ.

‘ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದು ನಾಚಿಕೆಗೇಡು’

ನಿಮ್ಮದೆ ಸರ್ಕಾರವಿದ್ದಾಗ 2016ರಲ್ಲಿ ಒಂದಲ್ಲ, ಎರೆಡೆರಡು ಬಾರಿ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಅಂದು ಲಕ್ಷಾಂತರ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಕಲ್ಲು ಹಾಕಿದ್ದು ಮರೆತುಹೋಯಿತೇ ? ಅಂದಿನ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ ರಾಜೀನಾಮೆ ಆಗ್ರಹಿಸಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡಿದ್ದರು. ಆಗ ಶಿಕ್ಷಣ ಸಚಿವರು ರಾಜೀನಾಮೆ ಕೊಟ್ಟಿದ್ದರೇ? ಎಂದು ಜೆಡಿಎಸ್​​ ಪ್ರಶ್ನಿಸಿದೆ. ಈಗ NEET ವಿಚಾರವಾಗಿ ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ, ಪ್ರಚೋದನೆ ನೀಡುವ ಮೂಲಕ ವಾಮಮಾರ್ಗದಲ್ಲಿ ಕಾಂಗ್ರೆಸ್‌ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದು ನಾಚಿಕೆಗೇಡು ಅಂತಲೂ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: NEET ಪ್ರತಿಭಟನೆ; ವಿದ್ಯಾರ್ಥಿಗಳ ಪರ ನಿಂತ ಯುವರಾಜ್ ಸಿಂಗ್!

‘ಈಗ ಮಾತನಾಡಲು ಯಾವ ನೈತಿಕತೆ ಇದೆ ?’

ವಾಲ್ಮೀಕಿ ಹಗರಣ, SCSP/TSP ಹಣ ದುರ್ಬಳಕೆ, ಕೆಪಿಎಸ್ಸಿ (KPSC) ಹಗರಣ, ಗೃಹಲಕ್ಷ್ಮಿ (5000 ಕೋಟಿ ) ಹಗರಣ ಸೇರಿ ಸಾಲು ಸಾಲು ಹಗರಣಗಳಾದಾಗ ಬಾಯಿ ಮುಚ್ಚಿಕೊಳ್ಳುವ ಕಾಂಗ್ರೆಸ್‌ ನಾಯಕರಿಗೆ, ಈಗ ಮಾತನಾಡಲು ಯಾವ ನೈತಿಕತೆ ಇದೆ ? ಧಾರವಾಡದಲ್ಲಿ ಉದ್ಯೋಗ ನೇಮಕಾತಿಗಾಗಿ ಹೋರಾಡಿದ ವಿದ್ಯಾರ್ಥಿಗಳ ಮೇಲೆ , ನರಗುಂದದಲ್ಲಿ ಕಬ್ಬು ಬೆಳೆಗಾರರ ಮೇಲೆ, ಬಿಡದಿಯಲ್ಲಿ ಭೂಸ್ವಾಧೀನ ವಿರೋಧಿಸುತ್ತಿರುವ ರೈತರ ಮೇಲೆ ಲಾಠಿ ಏಟು ಕೊಟ್ಟ ಜನವಿರೋಧಿ ಸರ್ಕಾರ ನಿಮ್ಮದು. ದಲಿತರ ಮನೆಗೆ ಬೆಂಕಿ ಬಿದ್ದಾಗ, ಹುಬ್ಬಳ್ಳಿಯಲ್ಲಿ ಗಲಭೆಯಾದಾಗ ನಿಮ್ಮ ಬಾಯಿ ಏಕೆ ಮುಚ್ಚಿತ್ತು ಕಾಂಗೆಸ್ಸಿಗರೇ ಎಂದು ಜೆಡಿಎಸ್​​ ಪ್ರಶ್ನಿಸಿದೆ. ಕಾಂಗ್ರೆಸ್‌ ಸರ್ಕಾರ ಮತ್ತು ಕಾಂಗ್ರೆಸ್‌ ನಾಯಕರ ಭ್ರಷ್ಟಾಚಾರ, ಬೂಟಾಟಿಕೆ ಹಾಗೂ ದ್ವಂದ್ವ ನೀತಿಯನ್ನು ರಾಜ್ಯದ ಯುವಜನತೆ ಗಮನಿಸುತ್ತಿದ್ದಾರೆ ಎಂದೂ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 2:08 pm, Thu, 23 July 26

Source link

Leave a Reply

Your email address will not be published. Required fields are marked *