ಬಾಗಲಕೋಟೆ, ಜುಲೈ 17: ಜಿಲ್ಲೆಯ ಜಮಖಂಡಿ ತಾಲೂಕಿನ ಕವಟಗಿ ಗ್ರಾಮದಲ್ಲಿ ಬಬಲೇಶ್ವರ-ತುಬಚಿ ಏತನೀರಾವರಿ ಯೋಜನೆಯ ಮುಖ್ಯ ಪೈಪ್ಲೈನ್ ಒಡೆದ ಪರಿಣಾಮ ಗಗನದೆತ್ತರಕ್ಕೆ ನೀರು ಚಿಮ್ಮಿದ ಘಟನೆ ನಡೆದಿದೆ. ಪೈಪ್ಲೈನ್ ಸಂಪೂರ್ಣವಾಗಿ ಹಾನಿಗೊಳಗಾದ ಪರಿಣಾಮ ಬೃಹತ್ ಪ್ರಮಾಣದಲ್ಲಿ ನೀರು ಆಕಾಶದತ್ತ ಚಿಮ್ಮಿದೆ. ಸುತ್ತಲಿನ ಹೊಲಗದ್ದೆಗಳು ಹಾಗೂ ರಸ್ತೆಗೆ ನೀರು ಹರಿದಿದೆ. ಇದರಿಂದಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ. ರೈತರ ಬೆಳೆಗಳಿಗೆ ಹಾನಿಯಾಗುವ ಭೀತಿ ಎದುರಾಗಿದೆ. ಇನ್ನು ಆಕಾಶದೆತ್ತರಕ್ಕೆ ಚಿಮ್ಮಿದ ನೀರಿನ ದೃಶ್ಯವು ನೋಡುಗರಲ್ಲಿ ತೀವ್ರ ಅಚ್ಚರಿ ಹಾಗೂ ಕೌತುಕವನ್ನು ಮೂಡಿಸಿದೆ. ಘಟನೆಯಿಂದಾಗಿ ಸ್ಥಳೀಯ ನಿವಾಸಿಗಳು ಹಾಗೂ ರೈತರು ಆತಂಕಗೊಂಡಿದ್ದು, ಸಂಬಂಧಪಟ್ಟ ನೀರಾವರಿ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಪೈಪ್ಲೈನ್ ದುರಸ್ತಿಗೊಳಿಸಿ ನೀರು ಪೋಲಾಗುವುದನ್ನು ತಡೆಯಬೇಕೆಂದು ಒತ್ತಾಯಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.