ಅಪಘಾತದಲ್ಲಿ ಜಖಂಗೊಂಡಿರುವ ವಾಹನಗಳು
ಬೆಂಗಳೂರು, ಫೆಬ್ರವರಿ 15: ನೆಲಮಂಗಲ ಜಿಂದಾಲ್ ಬಳಿ KSRTC ಬಸ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ನಡೆದಿದೆ. ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ಜಂಪ್ ಮಾಡಿ ಬೆಂಗಳೂರು ಕಡೆಯಿಂದ ಹೊರಟಿದ್ದ KSRTC ಬಸ್ಗೆ ಡಿಕ್ಕಿಯಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ. ಸಾವಿಗೀಡಾದವರಲ್ಲಿ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ ಎನ್ನಲಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೃತ ಹರ್ಷಿತ್ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಡಿಗ್ರಿ ಓದುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ.
ಮಾಹಿತಿ ಅಪ್ಡೇಟ್ ಆಗುತ್ತಿದೆ.