Headlines

ನೆಲಮಂಗಲ ಬಳಿ ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು – Kannada News | Five Die in Car–Bus Accident Near Jindal, Nelamangala in Bengaluru

ಅಪಘಾತದಲ್ಲಿ ಜಖಂಗೊಂಡಿರುವ ವಾಹನಗಳು

ಬೆಂಗಳೂರು, ಫೆಬ್ರವರಿ 15: ನೆಲಮಂಗಲ ಜಿಂದಾಲ್ ಬಳಿ KSRTC ಬಸ್​​ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ನಡೆದಿದೆ. ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್​​ ಜಂಪ್ ಮಾಡಿ ಬೆಂಗಳೂರು ಕಡೆಯಿಂದ ಹೊರಟಿದ್ದ KSRTC ಬಸ್​ಗೆ ಡಿಕ್ಕಿಯಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ. ಸಾವಿಗೀಡಾದವರಲ್ಲಿ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ ಎನ್ನಲಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೃತ ಹರ್ಷಿತ್​​ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಡಿಗ್ರಿ ಓದುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ.

ಮಾಹಿತಿ ಅಪ್ಡೇಟ್​​ ಆಗುತ್ತಿದೆ.

Source link

Leave a Reply

Your email address will not be published. Required fields are marked *