ಬೆಂಗಳೂರು, (ಆಗಸ್ಟ್ 08): ಬೆಂಗಳೂರು ನಗರದಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ದಾಳಿ ಇಂದು ಕೂಡ ಮುಂದುವರಿದಿದೆ. ನಗರದಲ್ಲಿರುವ ಫೈವ್ ಹಾಗೂ 3 ಸ್ಟಾರ್ ಹೋಟೆಲ್‌ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯಿಂದ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದು, ಹೋಟೆಲ್‌ಗಳ ಆಹಾರ ಸುರಕ್ಷತೆ ಮತ್ತು ಗುಣಮಟ್ಟ, ಅಡುಗೆಮನೆ, ಆಹಾರ ಸಂಗ್ರಹಣೆ ಮತ್ತು ನೈರ್ಮಲ್ಯ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಯಾಗಿರುವುದು ಕಂಡುಬಂದಿದೆ. ಇನ್ನು ಈ ಬಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಪಂಚತಾರಾ ಹೋಟೆಲ್ ಗಳ ಅಧ್ವಾನಕ್ಕೆ ಆಕ್ರೋಶಗೊಂಡಿದ್ದಾರೆ. ಸ್ಟಾರ್ ಹೋಟೆಲ್ಗಳಿ ಸ್ಥಿತಿಯನ್ನು ಜನರಿಗೆ ತಿಳಿಸಿಕೊಟ್ಟಿದ್ದೇವೆ. ಇನ್ನು ತಿನ್ನೋದು ಬಿಡೋದು ಜನರಿಗೆ ಬಿಟ್ಟ ವಿಚಾರ ಎಂದಿದ್ದಾರೆ.
