ಆನೇಕಲ್, ಜುಲೈ 31: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಇಂದು ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿದೆ. ಈ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ನಗುನಗುತ್ತಲೇ ಕಾಣಿಸಿಕೊಂಡರು. ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ನಂತರ ಜೈಲಿನಿಂದ ಹೊರಬಂದ ವಿನಯ್ ಕುಲಕರ್ಣಿಗೆ ಅಭಿಮಾನಿಗಳು ಹೂವಿನ ಹಾರ ಹಾಕಿ ಸ್ವಾಗತಿಸಿದರು. ಇನ್ನು ಈ ವೇಳೆ ಅಲ್ಲಿ ನೆರೆದಿದ್ದ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಲು ವಿನಯ್ ಕುಲಕರ್ಣಿ ನಿರಾಕರಿಸಿದರು. ವಿನಯ್ ಕುಲಕರ್ಣಿ ಬಿಡುಗಡೆಗೊಂಡಿರುವುದು ಧಾರವಾಡ ರಾಜಕೀಯ ವಲಯದಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.