ಬೆಂಗಳೂರು, ಜೂನ್ 18: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐವರು ದಿಗ್ವಿಜಯ ಸಾಧಿಸಿದ್ದಾರೆ. ಈ ಪೈಕಿ ತಿಪ್ಪಣ್ಣಪ್ಪ ಕಮಕನೂರು ಕೂಡ ಒಬ್ಬರು. ಭರ್ಜರಿ ಗೆಲುವು ಸಾಧಿಸುವ ತಿಪ್ಪಣ್ಣಪ್ಪ ಕಮಕನೂರು ಮೂರನೇ ಬಾರಿಗೆ ವಿಧಾನ ಪರಿಷತ್ಗೆ ಆಯ್ಕೆ ಆಗಿದ್ದಾರೆ. ಫಲಿತಾಂಶ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ನಿರೀಕ್ಷೆಗೂ ಮೀರಿ ಮತಗಳು ಲಭಿಸಿರುವುದಕ್ಕೆ ಭಾವುಕರಾದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸ್ಪರ್ಧಿಸಲು ಅವಕಾಶ ನೀಡಿದ್ದಕ್ಕೆ ಅವರು ಕೃತಜ್ಞತೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಕಟ್ಟಕಡೆಯ ಮನುಷ್ಯರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ವಿಧಾನಪರಿಷತ್ತಿನಲ್ಲಿ ಸರ್ಕಾರದ ಗಮನ ಸೆಳೆಯುವುದಾಗಿ ಹೇಳಿದರು. ಸಾಮಾಜಿಕ ನ್ಯಾಯ ಒದಗಿಸಲು ಬದ್ಧರಾಗಿರುವುದಾಗಿ ಹೇಳಿದ ಅವರು, 2028ರಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶ್ರಮಿಸುವುದಾಗಿ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.