ಬೆಂಗಳೂರು, ಜೂನ್ 18: ಪರಿಷತ್ನ 7 ಸ್ಥಾನ ಗಳಿಗೆ ನಡೆದ ಚುನಾವಣೆ ಮುಕ್ತಾಯಗೊಂಡಿದೆ. 222 ಮತ ಚಲಾವಣೆ ಆಗುವ ಮೂಲಕ ಶೇ.100ರಷ್ಟು ಮತದಾನ ಆಗಿದೆ. ಕೆಲವೇ ಹೊತ್ತಿನಲ್ಲಿ ಮತ ಎಣಿಕೆ ಕಾರ್ಯ ಕೂಡ ಆರಂಭಗೊಳ್ಳಲಿದೆ. ಈ ಮಧ್ಯೆ ಕಾಂಗ್ರೆಸ್ ನಾಯಕರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮಗೆ ಯಾವುದೇ ಅಡ್ಡಮತದಾನ ಭಯವಿಲ್ಲ. ಕಾಂಗ್ರೆಸ್ನ ಐವರು ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಐಕ್ಯತೆಯನ್ನು ಎತ್ತಿ ಹಿಡಿದು ನಾಯಕತ್ವದಲ್ಲಿ ಪಕ್ಷವು ಒಗ್ಗಟ್ಟನ್ನು ಪ್ರದರ್ಶಿಸಿದೆ. ಸಿಎಲ್‌ಪಿ ಶಾಸಕಾಂಗ ಸಭೆಗಳಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಪಕ್ಷದಲ್ಲಿ ಯಾವುದೇ ಭಯ ಅಥವಾ ಅಡ್ಡಮತದಾನದ ಆತಂಕವಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷವು ನಿರೀಕ್ಷೆಗಿಂತ ಹೆಚ್ಚು ಮತಗಳನ್ನು ಪಡೆಯುವ ವಿಶ್ವಾಸದಲ್ಲಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
