ಬೆಂಗಳೂರು, ಜೂನ್ 19: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಡ್ಡಮತದಾನದಿಂದ ತೀವ್ರ ಆಘಾತ ಎದುರಾಗಿದೆ. ನಾಲ್ಕರಿಂದ ಐದು ಜೆಡಿಎಸ್ ಶಾಸಕರು ಅಡ್ಡಮತದಾನ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದ್ದು, ಇದು ಪಕ್ಷದ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.ಈ ಅಡ್ಡಮತದಾನಕ್ಕೆ ಹಲವು ಆಂತರಿಕ ಕಾರಣಗಳನ್ನು ವಿಶ್ಲೇಷಿಸಲಾಗುತ್ತಿದೆ. ಪಕ್ಷದೊಳಗಿನ ಗುಂಪುಗಾರಿಕೆ, ನಾಯಕತ್ವದ ಕೊರತೆ, ಹಿರಿಯ ನಾಯಕರ ಮನವೊಲಿಕೆಯಲ್ಲಿನ ವಿಫಲತೆ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಯ ಬಗ್ಗೆ ಶಾಸಕರ ಅಸಮಾಧಾನ ಪ್ರಮುಖವಾಗಿವೆ. ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ರಾಜ್ಯದಲ್ಲಿ ನಾಯಕತ್ವದ ಕೊರತೆಯೂ ಎದ್ದುಕಾಣುತ್ತಿರುವ ಬಗ್ಗೆ ಮಾತುಗಳು ಕೇಳಿಬಂದಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.