ಪರಿಷತ್ ಚುನಾವಣೆ ಫಲಿತಾಂಶ ಪ್ರಕಟImage Credit source: Tv9 Kannada
ಬೆಂಗಳೂರು, ಜೂನ್ 18: ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಸೋಲುಂಡಿದ್ದು, ಬಿಜೆಪಿ ಮತ್ತು ಜೆಡಿಎಸ್ನಿಂದ ಕ್ರಾಸ್ ವೋಟಿಂಗ್ ಆಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಕಾಂಗ್ರೆಸ್ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ಗೆ 32 ಮತಗಳು ಬಂದಿದ್ದರೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಪರ 14 ಮತಗಳು ಬಿದ್ದಿವೆ.
ಯಾವ್ಯಾವ ಅಭ್ಯರ್ಥಿಗೆ ಎಷ್ಟು ಮತ?
- ಜೆಡಿಎಸ್ ಅಭ್ಯರ್ಥಿ ಗೋವಿಂದರಾಜುಗೆ 14 ಮತಗಳು
- ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ಗೆ 30 ಮತಗಳು
- ಕಾಂಗ್ರೆಸ್ನ ತಿಪ್ಪಣ್ಣಪ್ಪ ಕಮಕನೂರುಗೆ 30 ಮತಗಳು
- ಕಾಂಗ್ರೆಸ್ನ ಪಿ.ವಿ.ಮೋಹನ್ಗೆ 29 ಮತಗಳು
- ಕಾಂಗ್ರೆಸ್ನ ಬಿ.ಎಸ್.ಶಿವಣ್ಣಗೆ 30 ಮತಗಳು
- ಕಾಂಗ್ರೆಸ್ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ಗೆ 32 ಮತ
- ಬಿಜೆಪಿ ಅಭ್ಯರ್ಥಿ ಆರ್.ರಘುಗೆ 29 ಮತಗಳು
- ಬಿಜೆಪಿ ಅಭ್ಯರ್ಥಿ ಲಿಂಗರಾಜು ಪಾಟೀಲ್ಗೆ 27 ಮತಗಳು
ಇದನ್ನೂ ಓದಿ: ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ 5 ಸ್ವಾರಸ್ಯಕರ ಘಟನೆಗಳಿವು
ಎಲಿಮಿನೇಷನ್ ರೌಂಡ್ನಲ್ಲಿ ಲಿಂಗರಾಜ್ ಪಾಟೀಲ್ಗೆ ಜಯ
ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ಗೆ 11 ಹೆಚ್ಚುವರಿ ಮತಗಳು ದೊರೆತಿವೆ. ಶಿವರಾಂ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಹೊರತುಪಡಿಸಿ ಬಿಜೆಪಿಯ 3 ಮತ್ತು ಜೆಡಿಎಸ್ನ 6 ಶಾಸಕರಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾವಣೆಗೊಂಡಿದೆ. ಹೀಗಾಗಿ ಲಿಂಗರಾಜ ಪಾಟೀಲ್ ಗೆಲುವಿನ ಕೋಟಾ ತಲುಪಿರಲಿಲ್ಲ. ಪ್ರತಿ ಅಭ್ಯರ್ಥಿ ಗೆಲ್ಲಲು 27.63 ಮತ ಪಡೆಯಬೇಕು. ಆದರೆ ಲಿಂಗರಾಜ ಪಾಟೀಲ್ಗೆ ಕೇವಲ 27 ಮತಗಳು ಸಿಕ್ಕಿದ್ದವು. ಜೆಡಿಎಸ್ನ ಗೋವಿಂದರಾಜು 14 ಮತ ಪಡೆದಿದ್ದ ಹಿನ್ನೆಲೆ ಎಲಿಮಿನೇಷನ್ ರೌಂಡ್ನಲ್ಲಿ ಲಿಂಗರಾಜ್ ಪಾಟೀಲ್ಗೆ ಜಯ ಸಿಕ್ಕಿದೆ.
ಒಂದು ಮತ ಅಸಿಂಧು
ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಚಲಾವಣೆಗೊಂಡಿದ್ದ 222 ಮತಗಳ ಪೈಕಿ ಒಂದು ಮತ ಅಸಿಂಧುವಾಗಿದೆ.
ನಂಬರ್ ಸರಿಯಾಗಿ ಬರೆಯದಿದ್ದಕ್ಕೆ 1 ಮತವನ್ನು ತಿರಸ್ಕರಿಸಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 6:57 pm, Thu, 18 June 26