ಬೆಂಗಳೂರು, ಆಗಸ್ಟ್ 18: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಾಜಿ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಹೊಯ್ಸಳ ಡ್ರೀಮ್ಸ್ ಅಪಾರ್ಟ್ಮೆಂಟ್ನಲ್ಲಿರುವ ಅವರ ನಿವಾಸದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಮೊಬೈಲ್ ಅನ್ನು ಕೂಡ ವಶಪಡಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ. ಬೆಳಿಗ್ಗೆ 6 ಗಂಟೆಗೆ ಇಡಿ ಅಧಿಕಾರಿಗಳು ಮನೆ ಮೇಲೆ ದಾಳಿ ಮಾಡಿದ್ದು, ಆ ವೇಳೆ ಶಿವಶಂಕರಪ್ಪ ಪತ್ನಿ ದೇವಸ್ಥಾನಕ್ಕೆ ತೆರಳಿದ್ದರು. ಹೀಗಾಗಿ ಅವರನ್ನು ಹುಡುಕಿಕೊಂಡು ದೇವಸ್ಥಾನ ಬಳಿ ತೆರಳಿದ್ದ ಇಡಿ ಅಧಿಕಾರಿಗಳು ತೆರಳಿದ್ದರೆ, ಮತ್ತೊಂದು ಕಡೆಯಿಂದ ಶಿವಶಂಕರಪ್ಪ ಪತ್ನಿ ಮನೆಗೆ ಬಂದಿದ್ದರು ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.