ಬೆಳಗಾವಿ, ಜುಲೈ 13: ದೇಶದ ಹಲವು ಭಾಗಗಳಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದ್ದರೆ, ಇತ್ತ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇದರ ಪರಿಣಾಮವಾಗಿ ಬೆಳಗಾವಿ ಗಡಿಯಲ್ಲಿರುವ ವಿಶ್ವಪ್ರಸಿದ್ಧ ದೂದ್‌ಸಾಗರ ಜಲಪಾತವು ಧುಮ್ಮಿಕ್ಕಿ ಹರಿಯುತ್ತಿದೆ. ಹಾಲಿನ ಹೊಳೆಯಂತೆ ಕಾಣುವ 1017 ಅಡಿ ಎತ್ತರದಿಂದ ಭೋರ್ಗರೆಯುವ ಈ ಜಲಪಾತವು ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
