ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಭಯೋತ್ಪಾದನಾ ದಾಳಿಗೆ ಇಂದು (ಏ.22) ಒಂದು ವರ್ಷ. ಈ ಘಟನೆಯನ್ನು ಭಾರತ ಎಂದಿಗೂ ಮರೆಯುವುದಿಲ್ಲ. ಆದರೆ ಈ ಭೀಕರ ಘಟನೆ ನಡೆಯುದಕ್ಕೂ ಮುನ್ನ ಏನಾಗಿತ್ತು ಎಂಬ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗುತ್ತಿದ್ದು, ವಿಡಿಯೋದಲ್ಲಿನ ‘ಆಪರೇಟರ್’ ವರ್ತನೆ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ವೈರಲ್ ಆಗಿರುವ ವಿಡಿಯೋದಲ್ಲಿ, ಪ್ರವಾಸಿಗರು ಸಂಚರಿಸುತ್ತಿದ್ದ ವೇಳೆ ಹಠಾತ್ ಗುಂಡಿನ ದಾಳಿ ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಅಲ್ಲಿದ್ದ ಆಪರೇಟರ್ ಒಬ್ಬರು “ಅಲ್ಲಾ ಹು ಅಕ್ಬರ್” ಎಂದು ಜಪಿಸುತ್ತಿರುವುದು ಕೇಳಿಸುತ್ತದೆ. ಆದರೆ, ಆತ ಆತಂಕಗೊಂಡ ಪ್ರವಾಸಿಗರನ್ನು ರಕ್ಷಿಸುವ ಬದಲು, ಗುಂಡಿನ ದಾಳಿ ನಡೆಯುತ್ತಿದ್ದ ದಿಕ್ಕಿನತ್ತಲೇ ಅವರನ್ನು ತಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿಡಿಯೋವನ್ನು ಹಂಚಿಕೊಳ್ಳುತ್ತಿರುವ ಬಳಕೆದಾರರು ಆಪರೇಟರ್‌ನ ಉದ್ದೇಶದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಗುಂಡಿನ ಸದ್ದು ಕೇಳುತ್ತಿದ್ದರೂ ಆಪರೇಟರ್ ಪ್ರವಾಸಿಗರನ್ನು ಸುರಕ್ಷಿತ ಜಾಗಕ್ಕೆ ಕರೆದೊಯ್ಯುವ ಬದಲು ಫೈರಿಂಗ್ ಜೋನ್ ಕಡೆಗೆ ಏಕೆ ಸಾಗಿಸಿದ ಎಂಬುದು ಪ್ರಮುಖ ಪ್ರಶ್ನೆಯಾಗಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
