Headlines

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ: ಉಡುಪಿಯಲ್ಲಿ ಮತ್ತೊಬ್ಬನ ಬಂಧನ – Kannada News | Indian Navy Secret Leak Case: Another Arrest in Udupi Over Sharing Classified Information with Pakistan

ಉಡುಪಿ, ಫೆಬ್ರವರಿ 18: ಭಾರತೀಯ ನೌಕಾ ಪಡೆಗೆ (Indian Navy) ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ (Pakistan) ರವಾನಿಸಿದ ಪ್ರಕರಣದಲ್ಲಿ ಉಡುಪಿ (Udupi) ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೋಪ್ಯ ಮಾಹಿತಿಯನ್ನು ವಾಟ್ಸ್​ಆ್ಯಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನದ ಜತೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಬಂಧಿತನನ್ನು ಪಶ್ಚಿಮ ಬಂಗಾಳ ಮೂಲದ 21 ವರ್ಷದ ಆಲಿಫ್ ಇಸ್ಲಾಂ ಎಂದು ಗುರುತಿಸಲಾಗಿದೆ. ಆತ ಪ್ರಸ್ತುತ ಕೇರಳದ ಇಡುಕ್ಕಿ ಜಿಲ್ಲೆಯ ಮರಾಯು ಗ್ರಾಮದಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಬಂಧಿತ ಬಾಂಗ್ಲಾದೇಶದ ಪ್ರಜೆ ಆಗಿರಬಹುದೆಂಬ ಅನುಮಾನವನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣದಲ್ಲಿ ಈಗಾಗಲೇ 2025ರ ನವೆಂಬರ್ ಹಾಗೂ ಡಿಸೆಂಬರ್​​ನಲ್ಲಿ ಗುಜರಾತ್ ಮೂಲದ ಹಿರೇಂದ್ರ ಕುಮಾರ್, ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಮತ್ತೊಬ್ಬನ ಬಂಧನದೊಂದಿಗೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.

ಭಾರತೀಯ ನೌಕಾ ಸೇನೆಗೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ರಹಸ್ಯವಾಗಿ ಪಾಕಿಸ್ತಾನಕ್ಕೆ ರವಾನಿಸಿರುವ ಆರೋಪ ಹಿನ್ನೆಲೆ, ಉಡುಪಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಒಬ್ಬ ಪ್ರಮುಖ ಆರೋಪಿ ಮತ್ತು ಮಾಹಿತಿ ರವಾನಿಸಲು ಬಳಸಿದ ಫೇಸ್‌ಬುಕ್ ಪೇಜ್‌ ಅಡ್ಮಿನ್​ನ ಬಂಧನ ಬಾಕಿಯಿದೆ.

ಆರೋಪಿಗಳು ಕಳೆದ ಒಂದೂವರೆ ವರ್ಷಗಳಿಂದ ಹಡಗುಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿ, ತಾಂತ್ರಿಕ ಮಾಹಿತಿಗಳನ್ನು ವಾಟ್ಸ್​ಆ್ಯಪ್ ಮೂಲಕ ಪಾಕಿಸ್ತಾನದಲ್ಲಿ ಸಂಪರ್ಕದಲ್ಲಿದ್ದವರಿಗೆ ಕಳುಹಿಸುತ್ತಿದ್ದರು ಎನ್ನಲಾಗಿತ್ತು.

ಇದನ್ನೂ ಓದಿ: ಉಡುಪಿ: ಕೊಚ್ಚಿನ್ ಶಿಪ್ ಯಾರ್ಡ್​ನಿಂದ ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತ್ತಿದ್ದ ಉತ್ತರ ಪ್ರದೇಶದ ಇಬ್ಬರ ಬಂಧನ

ಭಾರತೀಯ ನೌಕಾಪಡೆಗೆ ಟಗ್‌ಗಳನ್ನು ನಿರ್ಮಿಸಿ ಕೊಡುವ ಸಂಸ್ಥೆ ಕೊಚ್ಚಿನ್ ಶಿಪ್ ಯಾರ್ಡ್. ಇದು ನೌಕಾಪಡೆಗೆ ಮಾತ್ರವಲ್ಲದೆ, ಖಾಸಗಿ ಸಂಸ್ಥೆಗಳಿಗೂ ಹಡಗುಗಳನ್ನು ನಿರ್ಮಿಸಿಕೊಡುತ್ತಿದೆ. ಸಂಸ್ಥೆಯ ಪ್ರಧಾನ ಕಚೇರಿ ಕೇರಳದಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *