Headlines

ಪಾಕಿಸ್ತಾನ್ ಗೆದ್ದರೆ ಸೆಮಿಫೈನಲ್ ಪಂದ್ಯ ಶಿಫ್ಟ್! – Kannada News | If Pakistan qualify, they will play Semi final 1 in Colombo

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಗಿದು ಸೂಪರ್-8 ಸುತ್ತು ಶುರುವಾಗಿದೆ. ಈ ಸುತ್ತಿನಲ್ಲಿ ಪಾಕಿಸ್ತಾನ್ ತಂಡ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯವು ಶಿಫ್ಟ್ ಆಗಲಿದೆ. ಅಂದರೆ ಟಿ20 ವಿಶ್ವಕಪ್​ನ ಮೊದಲ ಪಂದ್ಯಕ್ಕೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನವನ್ನು ನಿಗದಿ ಮಾಡಲಾಗಿದೆ.

ಇದಾಗ್ಯೂ ಪಾಕಿಸ್ತಾನ್ ತಂಡ ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮೊದಲ ಸೆಮಿಫೈನಲ್ ಪಂದ್ಯವನ್ನು ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ಆಯೋಜಿಸಲಾಗುತ್ತದೆ.

ಪಂದ್ಯ ಶಿಫ್ಟ್ ಏಕೆ?

  • ತಟಸ್ಥ ಸ್ಥಳದ ನಿಯಮ: ಪ್ರಸ್ತುತ ಟಿ20 ವಿಶ್ವಕಪ್ ಅನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿದೆ. ಇದಾಗ್ಯೂ ಪಾಕಿಸ್ತಾನ್ ತಂಡವು ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡುತ್ತಿದೆ. ಇದಕ್ಕೆ ಮುಖ್ಯ ಕಾರಣ ಪಾಕ್ ತಂಡವು ಭಾರತದಲ್ಲಿ ಪಂದ್ಯಾವಳಿ ಆಡಲು ಹಿಂದೇಟು ಹಾಕಿರುವುದು.
  • ಕೊಲಂಬೊದಲ್ಲಿ ಸೆಮಿಫೈನಲ್: ಪಾಕಿಸ್ತಾನ್ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದರೆ ಆ ಪಂದ್ಯವನ್ನು ಕೊಲಂಬೊದಲ್ಲಿ ಆಯೋಜಿಸುವುದು ಪೂರ್ವ ನಿರ್ಧರಿತ. ಹೀಗಾಗಿ ಪಾಕ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಿದರೆ ಆರ್​. ಪ್ರೇಮದಾಸ ಮೈದಾನದಲ್ಲಿ ಕಣಕ್ಕಿಳಿಯಲಿದೆ.

ಶ್ರೀಲಂಕಾ ಸೆಮಿಫೈನಲ್​ಗೆ ಬಂದರೆ?

ಶ್ರೀಲಂಕಾ ತಂಡವು ಸೆಮಿಫೈನಲ್​ಗೇರಿದರೂ ಸೆಮಿಫೈನಲ್ ಪಂದ್ಯವನ್ನು ಕೊಲಂಬೊದಲ್ಲಿ ಆಯೋಜಿಸಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಆತಿಥೇಯ ದೇಶವಾಗಿರುವುದು. ಆದರೆ ಮೊದಲ ಸೆಮಿಫೈನಲ್​ಗೆ ಭಾರತ ಮತ್ತು ಶ್ರೀಲಂಕಾ ಅರ್ಹತೆ ಪಡೆದರೆ ಆ ಪಂದ್ಯವನ್ನು ಕೊಲ್ಕತ್ತಾದಲ್ಲಿ ಆಯೋಜಿಸಲಾಗುತ್ತದೆ. ಅಂದರೆ ಇಲ್ಲಿ ಭಾರತ ಮೊದಲ ಸೆಮಿಫೈನಲ್​ಗೆ ಅರ್ಹತೆ ಪಡೆಯದೇ ಶ್ರೀಲಂಕಾ ಅರ್ಹತೆ ಪಡೆದಿದ್ದರೆ ಮಾತ್ರ ಮೊದಲ ಸೆಮಿಫೈನಲ್​ ಪಂದ್ಯವನ್ನು ಆರ್. ಪ್ರೇಮದಾಸ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ಶ್ರೀಲಂಕಾ, ಪಾಕಿಸ್ತಾನ್ ಬರದಿದ್ದರೆ?

ಶ್ರೀಲಂಕಾ ಮತ್ತು ಪಾಕಿಸ್ತಾನ್ ತಂಡಗಳು ಸೂಪರ್-8 ಸುತ್ತಿನಲ್ಲೇ ಹೊರಬಿದ್ದರೆ ಸೆಮಿಫೈನಲ್ ನಡೆಯುವುದು ಎಲ್ಲಿ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಕೊಲ್ಕತ್ತಾದಲ್ಲಿ.

ಅಂದರೆ ಪಾಕಿಸ್ತಾನ್ ಮತ್ತು ಶ್ರೀಲಂಕಾ ಸೆಮಿಫೈನಲ್​ಗೆ ಅರ್ಹತೆ ಪಡೆಯುವಲ್ಲಿ ವಿಫಲವಾದರೆ ಮಾರ್ಚ್ 4 ರಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯವನ್ನು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಟೀಮ್ ಇಂಡಿಯಾ ಕೇವಲ 11 ಓವರ್​ಗಳಲ್ಲಿ ಪಂದ್ಯ ಮುಗಿಸಬೇಕು!

ಹಾಗೆಯೇ ಮಾರ್ಚ್ 5 ರಂದು ನಡೆಯಲಿರುವ ದ್ವಿತೀಯ ಸೆಮಿಫೈನಲ್ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಫೈನಲ್ ಪಂದ್ಯವು ಮಾರ್ಚ್ 8 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಲಾಗುತ್ತದೆ.

Source link

Leave a Reply

Your email address will not be published. Required fields are marked *