ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಭರ್ಜರಿ ಜಯ ಸಾಧಿಸಿದೆ. ಟ್ರಿನಿಡಾಡ್ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ನಾಯಕ ರೋಸ್ಟನ್ ಚೇಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಮೊದಲ ಇನಿಂಗ್ಸ್:
ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಪರ ಶಾಯ್ ಹೋಪ್ (92) ಮತ್ತು ಕವೆಮ್ ಹಾಡ್ಜ್ (84) ಆಕರ್ಷಕ ಅರ್ಧಶತಕ ಬಾರಿಸಿದರು. ಈ ಹಾಫ್ ಸೆಂಚುರಿಗಳ ನೆರವಿನೊಂದಿಗೆ ವೆಸ್ಟ್ ಇಂಡೀಸ್ ತಂಡವು ಮೊದಲ ಇನಿಂಗ್ಸ್‌ನಲ್ಲಿ 311 ರನ್ಗಳಿಸಿ ಆಲೌಟ್ ಆಯಿತು.
ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಪಾಕಿಸ್ತಾನ್ ತಂಡದ ಪರ ಮಾಜಿ ನಾಯಕ ಶಾನ್ ಮಸೂದ್ (109) ಭರ್ಜರಿ ಶತಕ (109) ಸಿಡಿಸಿ ಮಿಂಚಿದ್ದರು. ಆದರೆ ವೆಸ್ಟ್ ಇಂಡೀಸ್‌ನ ಜಸ್ಟಿನ್ ಗ್ರೀವ್ಸ್ ಕೇವಲ 27 ರನ್ ನೀಡಿ 5 ವಿಕೆಟ್ ಕಬಳಿಸಿದ ಪರಿಣಾಮ ಪಾಕ್ ತಂಡವು ಪ್ರಥಮ ಇನಿಂಗ್ಸ್‌ನಲ್ಲಿ 282 ರನ್‌ಗಳಿಗೆ ಆಲೌಟ್ ಆಯಿತು.
ದ್ವಿತೀಯ ಇನಿಂಗ್ಸ್:
ಕೇವಲ 29 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್, ಪಾಕಿಸ್ತಾನದ ವೇಗಿ ಮೊಹಮ್ಮದ್ ಅಬ್ಬಾಸ್ (5/22) ಅವರ ಸ್ವಿಂಗ್ ಬೌಲಿಂಗ್‌ಗೆ ತತ್ತರಿಸಿ ಕೇವಲ 181 ರನ್‌ಗಳಿಗೆ ಸರ್ವಪತನ ಕಂಡಿತು.
ಕೊನೆಯ ಇನಿಂಗ್ಸ್‌ನಲ್ಲಿ 211 ರನ್‌ಗಳ ಸುಲಭ ಗುರಿ ಪಡೆದ ಪಾಕಿಸ್ತಾನ್ ಪರ ನಾಯಕ ಬಾಬರ್ ಆಝಂ ಅಜೇಯ 58 ರನ್ ಬಾರಿಸಿದರು. ಆದರೆ ಮತ್ತೊಂದೆಡೆ ಪಾಕ್ ಬ್ಯಾಟರ್ಗಳ ಪೆವಿಲಿಯನ್ ಪರೇಡ್ ನಡೆಸಿದ್ದರು. ಪರಿಣಾಮ ಪಾಕ್ ತಂಡವು ದ್ವಿತೀಯ ಇನಿಂಗ್ಸ್‌ನಲ್ಲಿ ಕೇವಲ 120 ರನ್‌ಗಳಿಗೆ ಆಲೌಟ್ ಆಯಿತು. ವೆಸ್ಟ್ ಇಂಡೀಸ್ ಪರ ಮಿಂಚಿನ ದಾಳಿ ಸಂಘಟಿಸಿದ ಜೇಡನ್ ಸೀಲ್ಸ್ ಕೇವಲ 20 ರನ್ ನೀಡಿ 5 ವಿಕೆಟ್ ಕಬಳಿಸಿದರು.
ವೆಸ್ಟ್ ಇಂಡೀಸ್ಗೆ ಅಮೋಘ ಜಯ:
211 ರನ್‌ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವನ್ನು 120 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ವೆಸ್ಟ್ ಇಂಡೀಸ್ ತಂಡವು 90 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ವಿಂಡೀಸ್ ಪಡೆ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.
ಪಾಕಿಸ್ತಾನ್ ಪ್ಲೇಯಿಂಗ್ 11: ಅಝಾನ್ ಅವೈಸ್ , ಇಮಾಮ್-ಉಲ್-ಹಕ್ , ಶಾನ್ ಮಸೂದ್ , ಬಾಬರ್ ಆಝಂ (ನಾಯಕ) ,
ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಸಲ್ಮಾನ್ ಅಘಾ , ಅಮೀರ್ ಜಮಾಲ್ , ಅಲಿ ಉಸ್ಮಾನ್ , ಖುರ್ರಂ ಶಹಝಾದ್ , ಮೊಹಮ್ಮದ್ ಅಲಿ , ಮೊಹಮ್ಮದ್ ಅಬ್ಬಾಸ್.
ಇದನ್ನೂ ಓದಿ: ಅಬ್ಬರ ಸಿಡಿಲಬ್ಬರ… ಏಕಾಂಗಿಯಾಗಿ ಪಂದ್ಯ ಗೆಲ್ಲಿಸಿದ ಸ್ಮೃತಿ ಮಂಧಾನ!
ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಬ್ರಾಂಡನ್ ಕಿಂಗ್ , ತೇಜ್ನರೈನ್ ಚಂದ್ರಪಾಲ್ , ಕವೆಮ್ ಹಾಡ್ಜ್ , ಶಾಯ್ ಹೋಪ್ (ವಿಕೆಟ್ ಕೀಪರ್ ), ಅಮೀರ್ ಜಾಂಗೊ, ಜಸ್ಟಿನ್ ಗ್ರೀವ್ಸ್ , ರೋಸ್ಟನ್ ಚೇಸ್ (ನಾಯಕ) , ಕೆಮರ್ ರೋಚ್ , ಜೋಮೆಲ್ ವಾರಿಕನ್ , ಶಮರ್ ಜೋಸೆಫ್ , ಜೇಡನ್ ಸೀಲ್ಸ್.
