ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರಲ್ಲಿ ಪಿರಿಯಡ್ಸ್ (Periods) ಹೈಜೀನ್ ಬಗ್ಗೆ ಜಾಗೃತಿ ಹೆಚ್ಚಾಗಿದೆ. ಈಗ ಮಹಿಳೆಯರು ತಾವು ಬಳಸುವ ಪ್ಯಾಡ್‌ನ ಗುಣಮಟ್ಟ ಮತ್ತು ಅದು ಚರ್ಮದ ಮೇಲೆ ಬೀರುವ ಪರಿಣಾಮಗಳತ್ತವೂ ಹೆಚ್ಚು ಗಮನ ಹರಿಸುತ್ತಿದ್ದಾರೆ. ತಜ್ಞರ ಪ್ರಕಾರ, ಸರಿಯಾದ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡದಿದ್ದರೆ ಚರ್ಮದ ಸಮಸ್ಯೆಗಳು ಮತ್ತು ಸೋಂಕಿನ ಅಪಾಯ ಹೆಚ್ಚಾಗಬಹುದು. ವೈದ್ಯರು ನೀಡುವ ಮಾಹಿತಿ ಪ್ರಕಾರ, ಸ್ಯಾನಿಟರಿ ಪ್ಯಾಡ್‌ನ ಮೇಲಿನ ಪದರ ದೇಹದ ಸೂಕ್ಷ್ಮ ಭಾಗದೊಂದಿಗೆ ನೇರ ಸಂಪರ್ಕದಲ್ಲಿರುತ್ತದೆ. ಪ್ಯಾಡ್‌ನಲ್ಲಿ ಹೆಚ್ಚು ಸುಗಂಧ ದ್ರವ್ಯಗಳು ಅಥವಾ ಹಾನಿಕಾರಕ ರಾಸಾಯನಿಕಗಳು ಇದ್ದರೆ ಚರ್ಮದಲ್ಲಿ ಉರಿ, ಕೆಂಪು ದದ್ದುಗಳು ಮತ್ತು ಅಲರ್ಜಿ ಸಮಸ್ಯೆಗಳು ಕಾಣಿಸಬಹುದು. ವಿಶೇಷವಾಗಿ ಬೇಸಿಗೆ ಮತ್ತು ತೇವಾಂಶ ಇರುವ ವಾತಾವರಣದಲ್ಲಿ ದೀರ್ಘಕಾಲ ಒಂದೇ ಪ್ಯಾಡ್ ಬಳಸುವುದರಿಂದ ಬ್ಯಾಕ್ಟೀರಿಯಾ ಹಾಗೂ ಫಂಗಲ್ ಇನ್‌ಫೆಕ್ಷನ್ ಅಪಾಯ ಹೆಚ್ಚಾಗುತ್ತದೆ. ಹಾಗಾದರೆ ಯಾವ ರೀತಿಯ ಪ್ಯಾಡ್ ಬಳಸಬೇಕು, ಏನಿದು ಮೋರಿಂಗಾ ಪ್ಯಾಡ್, ಇದು ನಿಜವಾಗಿಯೂ ಉಪಯೋಗಕಾರಿಯೇ ಎಂಬುದನ್ನು ತಿಳಿದುಕೊಳ್ಳಿ.
ಯಾವ ರೀತಿಯ ಪ್ಯಾಡ್ ಬಳಸಬೇಕು?
ತಜ್ಞರು, ಮಹಿಳೆಯರಿಗೆ ಮೃದುವಾದ, ಗಾಳಿಯಾಡುವ ಮತ್ತು ಚರ್ಮ ಸ್ನೇಹಿ ಪ್ಯಾಡ್‌ಗಳನ್ನು ಬಳಸುವಂತೆ ಸಲಹೆ ನೀಡುತ್ತಾರೆ. ಹೆಚ್ಚು ಸುಗಂಧವಿರುವ ಪ್ಯಾಡ್‌ಗಳನ್ನು ಬಳಸದಿರುವುದು ಉತ್ತಮ ಎಂದು ಹೇಳಿದ್ದಾರೆ. ಜೊತೆಗೆ ಪ್ರತಿ 4ರಿಂದ 6 ಗಂಟೆಗಳಿಗೊಮ್ಮೆ ಪ್ಯಾಡ್ ಬದಲಾಯಿಸುವುದು ಆರೋಗ್ಯದ ದೃಷ್ಟಿಯಿಂದ ಅಗತ್ಯವಾಗಿದೆ. ಹೆಚ್ಚು ಬೆವರು ಅಥವಾ ಚರ್ಮದ ಸಮಸ್ಯೆ ಇರುವಂತಹ ಮಹಿಳೆಯರಿಗೆ ಕಾಟನ್ ಆಧಾರಿತ ಪ್ಯಾಡ್‌ಗಳು ಅಥವಾ ಕಾಟನ್ ಪ್ಯಾಂಟಿ ಉತ್ತಮ ಆಯ್ಕೆ ಎಂದು ವೈದ್ಯರು ಹೇಳಿದ್ದಾರೆ.
ಇದನ್ನೂ ಓದಿ: ಋತುಚಕ್ರದ ಸಮಯದಲ್ಲಿ ಈ ಆಹಾರಗಳನ್ನು ಕಡ್ಡಾಯವಾಗಿ ಸೇವಿಸಬೇಕು!
ಮೋರಿಂಗಾ ಪ್ಯಾಡ್ ನಿಜವಾಗಿಯೂ ಉಪಯೋಗಕಾರಿಯೇ?
ಇತ್ತೀಚೆಗೆ ಮೋರಿಂಗಾ ಆಧಾರಿತ ಸ್ಯಾನಿಟರಿ ಪ್ಯಾಡ್‌ಗಳು ಗಮನ ಸೆಳೆಯುತ್ತಿವೆ. ಮೋರಿಂಗಾದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿ ಕಡಿಮೆ ಮಾಡುವ ಗುಣಗಳಿರುವುದರಿಂದ ಚರ್ಮದ ಸಮಸ್ಯೆ ಹಾಗೂ ದುರ್ಗಂಧ ಕಡಿಮೆ ಮಾಡಲು ಸಹಾಯಕವಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಮಹಿಳೆಯರ ಆರೋಗ್ಯಕ್ಕೆ ಪೀರಿಯಡ್ಸ್ ಹೈಜೀನ್ ಅತ್ಯಂತ ಮುಖ್ಯ. ಆದ್ದರಿಂದ ಗುಣಮಟ್ಟದ ಮತ್ತು ಸುರಕ್ಷಿತ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡುವುದು ಆರೋಗ್ಯ ಕಾಪಾಡುವ ಪ್ರಮುಖ ಹೆಜ್ಜೆಯಾಗಿದೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ