Headlines

ಪೂರನ್-ಕರನ್ ಸಿಡಿಲಬ್ಬರ: MI ಲಂಡನ್ ಶುಭಾರಂಭ – Kannada News | MI London vs Sunrisers Leeds, 1st Match Highlights

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್ ಕ್ರಿಕೆಟ್ ಟೂರ್ನಿ ಶುರುವಾಗಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಎಂಐ ಲಂಡನ್ ತಂಡವು ಭರ್ಜರಿ ಜಯದೊಂದಿಗೆ ಶುಭಾರಂಭ ಮಾಡಿದೆ. ಸನ್​ರೈಸರ್ಸ್ ಲೀಡ್ಸ್​ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಲಂಡನ್ ತಂಡದ ನಾಯಕ ಸ್ಯಾಮ್ ಕರನ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಲೀಡ್ಸ್ ತಂಡಕ್ಕೆ ಆರಂಭಿಕ ದಾಂಡಿಗ ಮಿಚೆಲ್ ಮಾರ್ಷ್ (41 ರನ್, 27 ಎಸೆತ) ಉತ್ತಮ ಆರಂಭ ಒದಗಿಸಿದ್ದರು. ಇನ್ನು ರಯಾನ್ ರಿಕೆಲ್ಟನ್ 25 ರನ್​ಗಳ ಕೊಡುಗೆ ನೀಡಿದರು. ಆದರೆ ಬಳಿಕ ಬಂದ ಸನ್​ರೈಸರ್ಸ್ ಲೀಡ್ಸ್ ತಂಡದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಲೀಡ್ಸ್ ತಂಡವು 99 ಎಸೆತಗಳಲ್ಲಿ 143 ರನ್​ಗಳಿಸಿ ಆಲೌಟ್ ಆಯಿತು.

ಎಂಐ ಲಂಡನ್ ಪರ ಅತ್ಯುತ್ತಮ ದಾಳಿ ಸಂಘಟಿಸಿದ ರಿಚರ್ಡ್ ಗ್ಲೀಸನ್ 19 ಎಸೆತಗಳಲ್ಲಿ ಕೇವಲ 25 ರನ್ ನೀಡಿ 4 ವಿಕೆಟ್ ಪಡೆದು ಮಿಂಚಿದರು. ಇನ್ನು ಸ್ಯಾಮ್ ಕರನ್ 15 ಎಸೆತಗಳಲ್ಲಿ 27 ರನ್ ನೀಡಿ 2 ವಿಕೆಟ್ ಕಬಳಿಸಿದರು.

144 ರನ್​ಗಳ ಗುರಿ:

100 ಎಸೆತಗಳಲ್ಲಿ 144 ರನ್​ಗಳ ಗುರಿ ಪಡೆದ ಎಂಐ ಲಂಡನ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ವಿಲ್ ಜ್ಯಾಕ್ಸ್​ ಕೇವಲ 2 ರನ್​ಗಳಿಸಿ ಔಟಾದರೆ, ಜೇಮ್ಸ್ ವಿನ್ಸ್ 17 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಜೇಸನ್ ರಾಯ್ (0) ಸೊನ್ನೆ ಸುತ್ತಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.

ಈ ಹಂತದಲ್ಲಿ ಕಣಕ್ಕಿಳಿದ ಸ್ಯಾಮ್ ಕರನ್ ಹಾಗೂ ನಿಕೋಲಸ್ ಪೂರನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಆಕ್ರಮಣಕಾರಿ ಬ್ಯಾಟಿಂಗ್​ಗೆ ಒತ್ತು ನೀಡಿದ ಈ ಜೋಡಿಯು ಸನ್​ರೈಸರ್ಸ್ ಲೀಡ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು.

ಪರಿಣಾಮ ಸ್ಯಾಮ್ ಕರನ್ ಬ್ಯಾಟ್​ನಿಂದ 39 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 60 ರನ್ ಮೂಡಿಬಂತು. ಮತ್ತೊಂದೆಡೆ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ನಿಕೋಲಸ್ ಪೂರನ್ 22 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 58 ರನ್ ಚಚ್ಚಿದರು. ಈ ಮೂಲಕ ಎಂಐ ಲಂಡನ್ ತಂಡವು 84 ಎಸೆತಗಳಲ್ಲಿ 144 ರನ್​ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಎಂಐ ಲಂಡನ್ ಪ್ಲೇಯಿಂಗ್ 11: ಜೇಮ್ಸ್ ವಿನ್ಸ್ , ವಿಲ್ ಜ್ಯಾಕ್ಸ್ , ಜೇಸನ್ ರಾಯ್ , ಸ್ಯಾಮ್ ಕರನ್ (ನಾಯಕ) , ನಿಕೋಲಸ್ ಪೂರನ್ (ವಿಕೆಟ್ ಕೀಪರ್) ಜೋಶ್ ಫಿಲಿಪ್ , ಟಾಮ್ ಕರನ್ , ರಶೀದ್ ಖಾನ್ , ಟ್ರೆಂಟ್ ಬೌಲ್ಟ್ , ರಿಚರ್ಡ್ ಗ್ಲೀಸನ್ , ನಾಥನ್ ಸೌಟರ್.

ಇದನ್ನೂ ಓದಿ: ನೋ ಬಾಲ್ ಎಸೆದರೆ ಬೌಲರ್ ಬೌಲ್ಡ್​: 10 ಹೊಸ ನಿಯಮ ಪರಿಚಯಿಸಿದ ಬಿಸಿಸಿಐ

ಸನ್​ರೈಸರ್ಸ್​ ಲೀಡ್ಸ್​ ಪ್ಲೇಯಿಂಗ್ 11: ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್ , ಝಾಕ್ ಕ್ರಾಲಿ (ನಾಯಕ) ,
ಹ್ಯಾರಿ ಬ್ರೂಕ್ , ಡಾನ್ ಲಾರೆನ್ಸ್ , ಟಾಮ್ ಅಲ್ಸೋಪ್ , ಬೆನ್ನಿ ಹೋವೆಲ್ , ಬ್ರೈಡನ್ ಕಾರ್ಸ್ , ಮ್ಯಾಥ್ಯೂ ಪಾಟ್ಸ್ , ನಾಥನ್ ಎಲ್ಲಿಸ್ , ಅಬ್ರಾರ್ ಅಹ್ಮದ್.

Source link

Leave a Reply

Your email address will not be published. Required fields are marked *