ಪೆಟ್ರೋಲ್, ಡಿಸೇಲೆ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ವಾಹನ ಸವಾರರು – Kannada News | Bengaluru Fuel Price Hike Fear: Petrol, Diesel and LPG Costs Set to Rise

ಬೆಂಗಳೂರು, ಮೇ 02: ವಾಣಿಜ್ಯ ಸಿಲಿಂಡರ್ ಮತ್ತು ಎಲ್‌ಪಿಜಿ ಅನಿಲದ ಬೆಲೆ ಏರಿಕೆಯ ನಂತರ, ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಯು ವಾಹನ ಸವಾರರು ಮತ್ತು ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 102.96 ರೂಪಾಯಿ ಇದೆ. ಮುಂಬರುವ ನಾಲ್ಕರಿಂದ ಐದು ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 5 ರಿಂದ 6 ರೂಪಾಯಿವರೆಗೆ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪಂಚರಾಜ್ಯಗಳ ಚುನಾವಣೆಗಳು ಮುಗಿದ ನಂತರ ಈ ದರ ಏರಿಕೆ ಆಗುವ ಸೂಚನೆಗಳು ಕಂಡುಬರುತ್ತಿವೆ. ಈಗಾಗಲೇ ಗ್ಯಾಸ್ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮ ಮತ್ತು ಆಟೋ ಚಾಲಕರು ಸಮಸ್ಯೆ ಎದುರಿಸುತ್ತಿದ್ದಾರೆ. ಇಂಧನ ಬೆಲೆ ಏರಿಕೆಯು ಸಾರ್ವಜನಿಕರ ಮೇಲೆ ಇನ್ನಷ್ಟು ಆರ್ಥಿಕ ಹೊರೆ ಹೇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *