
ಬೆಂಗಳೂರು, ಮೇ 15: ಪೆಟ್ರೋಲ್ ಮತ್ತು ಡೀಸೆಲ್ ದರ ದಿಢೀರ್ ಏರಿಕೆಯಾಗಿರುವುದು ಬೆಂಗಳೂರಿನ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿ ಲೀಟರ್ ಪೆಟ್ರೋಲ್ಗೆ 3.27 ರೂಪಾಯಿ ಹಾಗೂ ಡೀಸೆಲ್ಗೆ 3.12 ರೂಪಾಯಿ ಹೆಚ್ಚಳವಾಗಿದ್ದು, ಬೆಳಗ್ಗೆಯೇ ಪೆಟ್ರೋಲ್ ಬಂಕ್ಗಳಿಗೆ ಬಂದ ಸವಾರರು ಬೆಲೆ ಏರಿಕೆ ಕಂಡು ಕಂಗಾಲಾಗಿದ್ದಾರೆ. ಡೀಸೆಲ್ ದರ ಏರಿಕೆಯಿಂದಾಗಿ ಸರಕು ಸಾಗಣೆ ವೆಚ್ಚ ಹೆಚ್ಚಾಗಲಿದ್ದು, ಇದರ ನೇರ ಪರಿಣಾಮ ದಿನಸಿ ಮತ್ತು ತರಕಾರಿ ಬೆಲೆಗಳ ಮೇಲೆ ಬೀಳಲಿದೆ ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ‘ಟಿವಿ9’ ಬಳಿ ಅಳಲು ತೋಡಿಕೊಂಡ ಬೆಂಗಳೂರಿಗರು, ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ನಮಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಿಡಿಕಾರಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ