ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಶಾಕ್: ಇನ್ನೂ ಹೆಚ್ಚಾಗುತ್ತಾ ತೈಲ ಬೆಲೆ? ತಜ್ಞರು ಹೇಳೋದೇನು ನೋಡಿ – Kannada News | Will Fuel Prices Rise Further? Experts Predict Petrol and Diesel May Surge by Rs 10 to 15 Soon

ಬೆಂಗಳೂರು, ಮೇ 15: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 3 ರೂ.ನಷ್ಟು ಹೆಚ್ಚಳವಾಗಿದೆ. ಇದು ನಾಲ್ಕು ವರ್ಷಗಳ ಬಳಿಕ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಕೈಗೊಂಡ ಮೊದಲ ದರ ಪರಿಷ್ಕರಣೆಯಾಗಿದೆ. ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಉದ್ವಿಗ್ನ ಪರಿಸ್ಥಿತಿ ಜಾಗತಿಕ ಕಚ್ಚಾತೈಲ ಬೆಲೆಗಳ ಏರಿಕೆಗೆ ಕಾರಣವಾಗಿದೆ. ಭಾರತವು ತನ್ನ ಕಚ್ಚಾತೈಲದ ಶೇ 85-91 ಭಾಗವನ್ನು ಆಮದು ಮಾಡಿಕೊಳ್ಳುವುದರಿಂದ, ಅಂತರರಾಷ್ಟ್ರೀಯ ಮಾರುಕಟ್ಟೆಯ ಏರಿಳಿತ ನೇರವಾಗಿ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ.

ಕಳೆದ 11 ವಾರಗಳಿಂದ ಕಚ್ಚಾತೈಲ ಬೆಲೆ ಏರಿಕೆಯಾಗಿದ್ದರೂ, ದೇಶೀಯ ತೈಲ ಕಂಪನಿಗಳು ದರಗಳನ್ನು ಸ್ಥಿರವಾಗಿರಿಸಿದ್ದವು. ಆದರೆ ನಿರಂತರ ನಷ್ಟ ಮತ್ತು ಕಾರ್ಯಾಚರಣಾ ವೆಚ್ಚ ಹೆಚ್ಚಿದ ಕಾರಣ, ಬೆಲೆ ಏರಿಕೆ ಅನಿವಾರ್ಯವಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 97.77 ರೂ. ಮತ್ತು ಡೀಸೆಲ್ ಬೆಲೆ 90.67 ರೂ. ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ 106.17 ರೂ. ಮತ್ತು ಡೀಸೆಲ್ 94.10 ರೂ. ಆಗಿದೆ. ಮುಂದಿನ ದಿನಗಳಲ್ಲಿ ಇಂಧನ ಬೆಲೆ 10-15 ರೂ.ನಷ್ಟು ಏರಿಕೆಯಾಗಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *