ಮಲ್ಲಿಕಾರ್ಜುನ್ ಮುತ್ಯಾImage Credit source: Google
ಯಾದಗಿರಿ, ಫೆಬ್ರವರಿ 27: ಅಪ್ರಾಪ್ತ ಬಾಲಕಿಯೋರ್ವಳ ಜೊತೆ ಅನುಚಿತ ವರ್ತನೆ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪೋಷಕರೇ ದೂರು ನೀಡಿಲ್ಲ. ಆದ್ರೂ ಎಫ್ಐಆರ್ ದಾಖಲಿಸಿರುವ ಕಾರಣ, ಈ ಸಂಬಂಧ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಯಲಿದೆ.
ಪ್ರಕರಣ ರದ್ದು ಮಾಡುವಂತೆ ಭಕ್ತರ ಪಟ್ಟು
ಮಲ್ಲಿಕಾರ್ಜುನ ಮುತ್ಯಾ ಮೇಲೆ ಪೋಕ್ಸೋ ಕೇಸ್ ಹಿನ್ನಲೆ ಪ್ರಕರಣ ಕುರಿತು ಮುಂದಿನ ಹೋರಾಟದ ಬಗ್ಗೆ ಮಠದ ಆವರಣದಲ್ಲಿ ಸಭೆ ನಡೆಸಲಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಸೇರಿ ಭಕ್ತರು ಸಭೆಯಲ್ಲಿ ಭಾಗಿಯಾಗಿದ್ದು, ಮುಂದಿನ ಕಾನೂನು ಹೋರಾಟ ಸೇರಿ ಮಹತ್ವದ ನಿರ್ಣಯಗಳನ್ನು ಮಾಡಲಾಗಿದೆ. ಘಟನೆ ಸಂಬಂಧ ಅಪ್ರಾಪ್ತೆಯ ಪೋಷಕರು ದೂರು ನೀಡದಿದ್ದರೂ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ ಕೂಡಲೇ ಕೇಸ್ ಹಿಂಪಡೆಯಬೇಕು. ಇಲ್ಲದಿದ್ದಲ್ಲಿ ಜಿಲ್ಲೆಯಾದ್ಯಂತ ಬಖ್ತರು ಉಗ್ರ ಹೋರಾಟ ನಡೆಸೋದಾಗಿ ಮಹಲ್ ರೋಜಾ ಮಠದಲ್ಲಿ ಸಭೆ ಬಳಿಕ ಬಿಜೆಪಿ ನಾಯಕಿ ಲಲಿತಾ ಹೇಳಿದ್ದಾರೆ.
ಇದನ್ನೂ ಓದಿ: ಬಾಲಕಿ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್; ಮಲ್ಲಿಕಾರ್ಜುನ ಮುತ್ಯಾನ ಬಗ್ಗೆ ಹೇಳಿದ್ದಿಷ್ಟು
ಅಪ್ರಾಪ್ತೆಯ ಹೇಳಿಕೆಯನ್ನೂ ಪಡೆಯದೆ ಎಫ್ಐಆರ್ ದಾಖಲಿಸಲಾಗಿದೆ. ಇಲ್ಲಿ ಜಿಲ್ಲಾಡಳಿತ ಎಡವಿದ್ದು, ಕೇಸ್ ರದ್ದು ಮಾಡಲು ಎರಡು ದಿನ ಗಡುವು ನೀಡುತ್ತೇವೆ. ಆ ಬಳಿಕವೂ ಪ್ರಕರಣ ರದ್ದು ಮಾಡದಿದ್ದಲ್ಲಿ ಭಕ್ತರು ಅನಿವಾರ್ಯವಾಗಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಮಠದ ಭಕ್ತರು ಎಚ್ಚರಿಸಿದ್ದಾರೆ. ಈ ನಡುವೆ ಪ್ರಕರಣ ಸಂಬಂಧ ಪೊಲೀಸರು ನೋಟಿಸ್ ನೀಡಿದ್ದರೂ ಮಲ್ಲಿಕಾರ್ಜುನ್ ಮುತ್ಯಾ ಮಾತ್ರ ಈ ವರೆಗೂ ವಿಚಾರಣೆಗೆ ಹಾಜರಾಗಿಲ್ಲ. ಕೇಸ್ ದಾಖಲು ಬೆನ್ನಲ್ಲೇ ನಾಪತ್ತೆಯಾಗಿರುವ ಮುತ್ಯಾ ನಿನ್ನೆ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ರಿಲೀಸ್ ಮಾಡಿದ್ದರು. ಅತ್ತ ಮಹಾರಾಷ್ಟ್ರದ ಸೊಲ್ಲಾಪುರದಿಂದ ಅಪ್ರಾಪ್ತ ಬಾಲಕಿ ಪೋಷಕರಿಂದು ಕೂಡ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ, ವಿಡಿಯೋವನ್ನು ತಿರುಚಿರುವ ಆರೋಪ ಮಾಡಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
